ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವೈರಸ್‌: ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ

Last Updated 31 ಜನವರಿ 2020, 2:53 IST
ಅಕ್ಷರ ಗಾತ್ರ

ಚೀನಾದಲ್ಲಿ 200ಕ್ಕೂ ಅಧಿಕ ಜನರ ಸಾವಿಗೆ ಕಾರಣವಾಗಿ, ಸುಮಾರು 17 ರಾಷ್ಟ್ರಗಳಿಗೆಹರಡಿರುವ ಕೊರೊನಾ ವೈರಸ್‌ ಸೋಂಕನ್ನು ‘ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ’ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ.

ಕೊರೊನಾ ವೈರಸ್‌ ಸೋಂಕಿನಿಂದ ಚೀನಾದಲ್ಲಿ 213 ಜನ ಮೃತಪಟ್ಟಿದ್ದನ್ನು ಆರೋಗ್ಯ ಅಧಿಕಾರಿಗಳು ದೃಢಿಪಡಿಸಿಕೊಂಡು ವಿಶ್ವ ಆರೋಗ್ಯ ಸಂಸ್ಥೆಗೆ ವರದಿ ನೀಡಿದ ನಂತರ ಈ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ.

ಚೀನಾದ ಕೇಂದ್ರ ಭಾಗದಲ್ಲಿರುವ ವುಹಾನ್ ಪ್ರಾಂತ್ಯದಲ್ಲಿ 1200 ವ್ಯಕ್ತಿಗಳಿಗೆ ಸೋಂಕು ತಗುಲಿದ್ದು, ದೇಶದಲ್ಲಿ ಒಟ್ಟು 9000ಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.

ಭಾರತಕ್ಕೂ ಕಾಲಿಟ್ಟ ಕೊರೊನಾ

ಅಪಾಯಕಾರಿ ಕೊರೊನಾ ವೈರಸ್ ಸೋಂಕು ಭಾರತಕ್ಕೂ ಕಾಲಿಟ್ಟಿದೆ. ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT