ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್–19 | ರಷ್ಯಾದಲ್ಲಿ 87 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು

Last Updated 27 ಏಪ್ರಿಲ್ 2020, 21:18 IST
ಅಕ್ಷರ ಗಾತ್ರ

ಮಾಸ್ಕೊ: ರಷ್ಯಾ ಸೇನೆಯ874 ಯೋಧರಲ್ಲಿ ಕೊರೊನಾ‌ ಸೋಂಕು ಇರುವುದು ದೃಢಪಟ್ಟಿದೆ ಎಂದು ರಷ್ಯಾ ರಕ್ಷಣಾ ಸಚಿವಾಲಯ ತಿಳಿಸಿದೆ.ರಷ್ಯಾದಲ್ಲಿ ಇಲ್ಲಿಯವರೆಗೆ 87 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 794 ಜನರು ಮೃತಪಟ್ಟಿದ್ದಾರೆ.

379 ಸೈನಿಕರು ಮನೆಯಲ್ಲಿಯೇ ಪ್ರತ್ಯೇಕ ವಾಸವಿದ್ದಾರೆ.ಉಳಿದವರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾಲ್ವರು ಯೋಧರ ಸ್ಥಿತಿ ಗಂಭೀರವಾಗಿದ್ದು, ಒಬ್ಬರಿಗೆ ಕೃತಕ ಉಸಿರಾಟ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಭಾರತೀಯ ಪಾಸ್‌ಪೋರ್ಟ್‌ ಸೇವೆ ಪುನರಾರಂಭ
ದುಬೈ (ಪಿಟಿಐ): ಕೊರೊನಾ ವೈರಸ್ ಸಂಬಂಧ ಹೇರಲಾಗಿದ್ದ ಕೆಲ ನಿರ್ಬಂಧಗಳನ್ನು ಸಡಿಲಿಸಿರುವ ಕಾರಣ, ದುಬೈ ಮತ್ತು ಉತ್ತರ ಎಮಿರೇಟ್ಸ್‌ನ ಕೆಲ ಕೇಂದ್ರಗಳಲ್ಲಿ ಭಾರತೀಯ ಪಾಸ್‌ಪೋರ್ಟ್ ಸೇವೆಗಳು ಪುನರಾರಂಭಗೊಂಡಿವೆ ಎಂದು ಭಾರತೀಯ ದೂತಾವಾಸ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

‘ಈಗಾಗಲೇ ಅವಧಿ ಮುಗಿದಿರುವ ಅಥವಾ ಮೇ 31ರೊಳಗೆ ಮುಕ್ತಾಯಗೊಳ್ಳುವ ಪಾಸ್‌ಪೋರ್ಟ್‌ಗಳನ್ನು ಮಾತ್ರ ಈ ಕೇಂದ್ರಗಳಲ್ಲಿ ನವೀಕರಣಕ್ಕಾಗಿ ಸ್ವೀಕರಿಸಲಾಗುತ್ತದೆ’ ಎಂದು ದೂತಾವಾಸ ಕಚೇರಿ ಟ್ವಿಟರ್‌ನಲ್ಲಿ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT