ಪ್ಯಾರಿಸ್,ವಾಷಿಂಗ್ಟನ್ (ಎಎಫ್‌ಪಿ, ಪಿಟಿಐ): ಕೊರೊನಾ ವೈರಸ್ ಸೋಂಕು ಜಗತ್ತಿನಾದ್ಯಂತ ದಿನೇ ದಿನೇ ತೀವ್ರ ಗತಿಯಲ್ಲಿ ವ್ಯಾಪಿಸುತ್ತಿದ್ದು, ಇದುವರೆಗೆ 32 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಯುರೋಪ್ ರಾಷ್ಟ್ರಗಳಲ್ಲೇ ಅತಿ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಇಟಲಿಯಲ್ಲಿ 10 ಸಾವಿರಕ್ಕೂ ಹೆಚ್ಚು ಹಾಗೂ ಸ್ಪೇನ್‌ನಲ್ಲಿ 6 ಸಾವಿರಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ.

183 ರಾಷ್ಟ್ರಗಳಿಗೆ ಸೋಂಕು ವ್ಯಾಪಿಸಿದ್ದು, 6.6 ಲಕ್ಷಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ 1.34 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ದಿನೇ ದಿನೇ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಭಾನುವಾರದ ವೇಳೆಗೆ 2,000ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.