ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವದಾದ್ಯಂತ ಕೊರೊನಾ ವೈರಸ್‌ ತಲ್ಲಣ: 1.19 ಲಕ್ಷ ಸಾವು

Last Updated 14 ಏಪ್ರಿಲ್ 2020, 4:31 IST
ಅಕ್ಷರ ಗಾತ್ರ

ಪ್ಯಾರಿಸ್‌: ಜಾಗತಿಕವಾಗಿ ವ್ಯಾಪಿಸುತ್ತಿರುವ ಕೊರೊನಾ ವೈರಸ್‌ (ಕೋವಿಡ್ -19) ರೋಗಕ್ಕೆ ಇಲ್ಲಿಯವರೆಗೆ 1,19, 699 ಮಂದಿ ಬಲಿಯಾಗಿದ್ದಾರೆ.

ವಿಶ್ವದ 183 ರಾಷ್ಟ್ರಗಳಲ್ಲಿ ಸೋಂಕು ಪೀಡಿತರ ಒಟ್ಟು ಸಂಖ್ಯೆ (ಅಧಿಕೃತ) 19,25,151 ಆಗಿದ್ದು, 1,19, 699 ಜನರು ಈವರೆಗೆ ಮೃತಪಟ್ಟಿದ್ದಾರೆ.

ಇನ್ನು ಕೆಲವು ಮೂಲಗಳ ಪ್ರಕಾರ, ಸೋಂಕು ಪೀಡಿತರ ಸಂಖ್ಯೆ 13,60, 435 ತಲುಪಿದ್ದು, 5,64, 716 ಮಂದಿ ಗುಣಮುಖರಾಗಿದ್ದಾರೆ ಎನ್ನಲಾಗಿದೆ.

ನ್ಯೂಯಾರ್ಕ್‌ನಲ್ಲೇ ಹೆಚ್ಚು ಸೋಂಕಿತರು
ನ್ಯೂಯಾರ್ಕ್‌:
ಕೋವಿಡ್‌–19ನ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿರುವ ನ್ಯೂಯಾರ್ಕ್‌ನಲ್ಲಿ ದಿನೇ ದಿನೇ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಅಮೆರಿಕದ ಈ ನಗರವೊಂದರಲ್ಲೇ 1 ಲಕ್ಷಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಈ ಸಂಖ್ಯೆಯು ಚೀನಾ ಮತ್ತು ಬ್ರಿಟನ್‌ಗಿಂತಲೂ ಹೆಚ್ಚಾಗಿದೆ.

ಇದುವರೆಗೆ 10 ಸಾವಿರಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ನ್ಯೂಯಾರ್ಕ್‌ ರಾಜ್ಯದಲ್ಲಿ 1.89 ಲಕ್ಷಕ್ಕೂ ಹೆಚ್ಚು ಸೋಂಕಿತರು ಇರುವುದು ದೃಢಪಟ್ಟಿದೆ.

ಅಮೆರಿಕದಲ್ಲಿ ಈವರೆಗೆ 23, 644 ಮಂದಿ ಮೃತಪಟ್ಟಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ‘ಸಾಮಾಜಿಕ ಅಂತರ (ಸೋಷಿಯಲ್ ಡಿಸ್ಟೆನ್ಸಿಂಗ್)’ ಕಾಯ್ದುಕೊಳ್ಳುವ ಮಾರ್ಗಸೂಚಿಗಳನ್ನು ಏಪ್ರಿಲ್‌ 30ರ ವರೆಗೆ ವಿಸ್ತರಿಸಲಾಗಿದೆ.

ಸ್ಪೇನ್‌ನಲ್ಲಿ ಸೋಂಕಿಗೆ ಈವರೆಗೆ 17, 756 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲ್ಲೇ ಇದೆ. ಇಟಲಿಯಲ್ಲಿ 20, 465 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT