ಶುಕ್ರವಾರ, ಮೇ 29, 2020
27 °C
ಪಾಕಿಸ್ತಾನದಲ್ಲಿ ಒಂದೇ ದಿನ 1,841 ಪ್ರಕರಣ

Covid-19 World Update: ವಿಶ್ವದಾದ್ಯಂತ 3.19 ಲಕ್ಷ ದಾಟಿದ ಸಾವಿನ ಸಂಖ್ಯೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Coronavirus

ವಾಷಿಂಗ್ಟನ್: ವಿಶ್ವದಾದ್ಯಂತ ಕೊರೊನಾ ವೈರಸ್ (ಕೋವಿಡ್–19) ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಈವರೆಗೆ 319,213 ಜನ ಮೃತಪಟ್ಟಿದ್ದಾರೆ.

ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 48 ಲಕ್ಷ ದಾಟಿದೆ. ಜಾನ್ಸ್‌ ಹಾಪ್‌ಕಿನ್ಸ್ ಕೊರೊನಾ ವೈರಸ್ ರಿಸೋರ್ಸ್ ಸೆಂಟರ್ ಮಾಹಿತಿ ಪ್ರಕಾರ, ಜಗತ್ತಿನಾದ್ಯಂತ ಈವರೆಗೆ 4,836,329 ಜನರಿಗೆ ಸೋಂಕು ತಗುಲಿದೆ. 319,213 ಜನ ಮೃತಪಟ್ಟಿದ್ದು, 1,805,093 ಜನ ಚೇತರಿಸಿಕೊಂಡಿದ್ದಾರೆ.

ಕೊರೊನಾದಿಂದ ತತ್ತರಿಸಿರುವ ಅಮೆರಿಕದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 90,432ಕ್ಕೆ ಏರಿಕೆಯಾಗಿದೆ. ರಷ್ಯಾದಲ್ಲಿ ಈವರೆಗೆ 299,941 ಜನರಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ, 2,837 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: 

ಸ್ಪೇನ್‌ನಲ್ಲಿ ಸೋಂಕಿತರ ಸಂಖ್ಯೆ 231,606ಕ್ಕೆ ಏರಿಕೆಯಾಗಿದ್ದು, 27,709 ಮಂದಿ ಸಾವಿಗೀಡಾಗಿದ್ದಾರೆ. ಬ್ರಿಟನ್‌ನಲ್ಲಿ ಸೋಂಕಿತರ ಸಂಖ್ಯೆ 247,709ಕ್ಕೆ ಏರಿಕೆಯಾಗಿದ್ದು, 34,876 ಸೋಂಕಿತರು ಅಸುನೀಗಿದ್ದಾರೆ.

ಪಾಕ್‌ನಲ್ಲಿ ಒಂದೇ ದಿನ 1,841 ಪ್ರಕರಣ: ಪಾಕಿಸ್ತಾನದಲ್ಲಿ ಒಂದೇ ದಿನ 1,841 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 43,966ಕ್ಕೆ ಏರಿಕೆಯಾಗಿದೆ. ಈವರೆಗೆ 939 ಸೋಂಕಿತರು ಸಾವಿಗೀಡಾಗಿದ್ದಾರೆ. ರಾಷ್ಟ್ರ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಸೋಂಕಿತರ ಸಂಖ್ಯೆ ಸಾವಿರ ದಾಟಿದೆ.

ಈವರೆಗೆ ಸಿಂಧ್‌ನಲ್ಲಿ 17,241, ಪಂಜಾಬ್‌ನಲ್ಲಿ 15,976, ಖೈಬರ್ ಪಖ್ತುಂಖ್ವಾದಲ್ಲಿ 6,230, ಬಲೂಚಿಸ್ತಾನದಲ್ಲಿ 2,820, ಇಸ್ಲಾಮಾಬಾದ್‌ನಲ್ಲಿ 1,034, ಗಿಲ್ಗಿಟ್–ಬಾಲ್ಟಿಸ್ತಾನದಲ್ಲಿ 550 ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ 115 ಪ್ರಕರಣಗಳು ದೃಢಪಟ್ಟಿವೆ ಎಂದು ಪಾಕಿಸ್ತಾನದ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು