ಮಂಗಳವಾರ, ಮೇ 26, 2020
27 °C

ಕೊರೊನಾ ಭೀತಿ: ಭಾರತೀಯರನ್ನು ತವರಿಗೆ ಮರಳಿಸಲು ಸಹಾಯ ಹಸ್ತ ಚಾಚಿದ ಅಮೆರಿಕ ಸರ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಸಿಂಗ್ಟನ್‌: ವ್ಯಾಪಕವಾಗುತ್ತಿರುವ ಕೊರೊನಾ ಸೋಂಕು ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯರನ್ನು ಆತಂಕಕ್ಕೀಡು ಮಾಡಿದ್ದು, ಅವರನ್ನು ತವರಿಗೆ ಮರಳಿಸಲು ಅಲ್ಲಿನ ಸರ್ಕಾರ ಭಾರತದೊಂದಿಗೆ ಮಾತುಕತೆ ನಡೆಸಿದೆ. 

ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಭಾರತ ಹಾಗೂ ಅಮೆರಿಕ ದೇಶಗಳು ವಿದೇಶಿ ವಿಮಾನ ಹಾರಾಟಕ್ಕೆ ನಿರ್ಬಂಧ ಹೇರಿವೆ. ಆ ಕಾರಣ, ಅಮೆರಿಕದಲ್ಲಿ ನೆಲೆಸಿರುವ ಭಾರತೀಯರು ಸ್ವದೇಶಕ್ಕೆ ಮರಳುವ ಸಾಧ್ಯತೆಗಳು ಇರಲಿಲ್ಲ. 

ಅಮೆರಿಕದಲ್ಲಿ ನೆಲೆಸಿರುವ ಭಾರತೀಯರು ತವರಿಗೆ ಮರಳುವ ಬಯಕೆ ಹೊಂದಿದ್ದು, ಭಾರತಕ್ಕೆ ವಾಪಸ್ಸಾಗಲು ಅವರಿಗೆ ಸಹಾಯ ಮಾಡುವುದಾಗಿ ಟ್ರಂಪ್‌ ಸರ್ಕಾರ ಹೇಳಿದೆ. ಈ ವಿಚಾರವಾಗಿ ಭಾರತ ಸರ್ಕಾರದೊಂದಿಗೆ ನಿರಂತರ ಸಂಪರ್ಕ ಹೊಂದಿರುವುದಾಗಿ ತಿಳಿಸಿದೆ. 

ಮುಂದಿನ ಎರಡು ವಾರಗಳಲ್ಲಿ ಅಮೆರಿಕದಲ್ಲಿ ಕೊರೊನ ಸೋಂಕು ವ್ಯಾಪಕವಾಗಿ ಹರಡಲಿದ್ದು, ಭೀಕರ ಪರಿಸ್ಥಿತಿ ತಲೆದೋರಬಹುದು ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು