ಬುಧವಾರ, ಏಪ್ರಿಲ್ 1, 2020
19 °C

ಕೊರೊನಾ ವೈರಸ್ ದಾಳಿಗೆ ಚೀನಾದಲ್ಲಿ ಮೃತಪಟ್ಟವರ ಸಂಖ್ಯೆ 2,004ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೀಜಿಂಗ್: ಚೀನಾವಲ್ಲದೆ ಪ್ರಪಂಚದ ಹಲವು ದೇಶಗಳಲ್ಲಿ ಭೀತಿ ಸೃಷ್ಟಿಸಿರುವ ಕೊರೊನಾ ವೈರಸ್ ದಾಳಿಗೆ ಚೀನಾದಲ್ಲಿ ಮೃತಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ. 

ಕಳೆದ 24 ಗಂಟೆಗಳಲ್ಲಿ 136 ಹೊಸ ಸಾವುಗಳು ಸಂಭವಿಸಿದ್ದು, ಇದುವರೆಗೂ ಮೃತಪಟ್ಟವರ ಸಂಖ್ಯೆ 2,004ಕ್ಕೆ ಏರಿಕೆಯಾಗಿದೆ ಎಂದು ಚೀನಾದ ಆರೋಗ್ಯ ಸಮಿತಿ ಬುಧವಾರ ತಿಳಿಸಿದೆ.

1,749 ಹೊಸ ಕೊರೊನಾ ವೈರಸ್ ಸೋಂಕು ತಗುಲಿದ ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೂ, 74,185 ಮಂದಿಗೆ ಸೋಂಕು ತಗುಲಿದೆ. ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ 1,824 ಜನರು ಬಿಡುಗಡೆಯಾಗಿದ್ದು, ಇದು 14,376ಕ್ಕೆ ಏರಿದೆ ಎಂದು ಹೇಳಲಾಗಿದೆ. 

31 ಪ್ರಾಂತ್ಯಗಳಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ, ಕೊರೊನಾ ವೈರಸ್ ಸೋಂಕು ತಗುಲಿರುವ 74,185 ಪ್ರಕರಣಗಳ ಪೈಕಿ 57,805 ಜನರು ಸೋಂಕಿಗೆ ಒಳಗಾಗಿದ್ದಾರೆ. 11,977 ಜನರು ಗಂಭೀರ ಸ್ಥಿತಿಯಲ್ಲಿದ್ದಾರೆ ಮತ್ತು 14,376 ಜನರನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ಸಮಿತಿ ತಿಳಿಸಿದೆ.

ಹುಬೆ ರಾಜಧಾನಿಯಾದ ವುಹಾನ್‌ನಲ್ಲಿ ಮೊದಲ ಬಾರಿಗೆ ಕೊರೊನಾ ವೈರಸ್ ಸೋಂಕು ಹರಡಲಾಗಿದೆ ಎಂದು ನಂಬಲಾಗಿದ್ದು, ನಗರದಲ್ಲಿ ಬುಧವಾರ 1,693 ಹೊಸ ಪ್ರಕರಣಗಳು ಮತ್ತು 132 ಸಾವುಗಳು ಸಂಭವಿಸಿವೆ. ಇಲ್ಲಿಯವರೆಗೆ ಹುಬೆಯಲ್ಲಿ 9,100 ಕ್ಕೂ ಹೆಚ್ಚು ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಮತ್ತು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 11,200 ಜನರು ಗಂಭೀರ ಸ್ಥಿತಿಯಲ್ಲಿದ್ದಾರೆ  ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಹೇಳಿದೆ.

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಅಧಿಕಾರಿಗಳು ಚೀನಾಕ್ಕೆ ಪ್ರಯಾಣ ಮತ್ತು ವ್ಯಾಪಾರವನ್ನು ನಿರ್ಬಂಧಿಸುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಇತರೆ ದೇಶಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕೊರೊನಾ ವೈರಸ್ ಸೋಂಕು ತಗುಲುವುದನ್ನು ನಿಯಂತ್ರಿಸಲು ಚೀನಾ ಕೈಗೊಂಡಿರುವ ಕಠಿಣ ಕ್ರಮಗಳನ್ನು ಶ್ಲಾಘಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು