ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರಣಾಂತಿಕ ಕೊರೊನಾ ವೈರಸ್ ಸೋಂಕಿಗೆ ಬಲಿಯಾದವರ ಸಂಖ್ಯೆ 636ಕ್ಕೆ ಏರಿಕೆ

Last Updated 7 ಫೆಬ್ರುವರಿ 2020, 6:16 IST
ಅಕ್ಷರ ಗಾತ್ರ

ಬೀಜಿಂಗ್‌: ದಿನದಿಂದ ದಿನಕ್ಕೆ ಜನರನ್ನು ಬಲಿಪಡೆಯುತ್ತಿರುವ ಕೊರೊನಾ ವೈರಸ್‌ ಸೋಂಕಿನಿಂದಾಗಿ ಚೀನಾದಲ್ಲಿ ಮೃತಪಟ್ಟವರ ಸಂಖ್ಯೆ 636ಕ್ಕೆ ಏರಿಕೆಯಾಗಿದ್ದು, ಇದುವರೆಗೂ ಸುಮಾರು 30,000ಕ್ಕೂ ಅಧಿಕ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಹೊಸದಾಗಿ 3,143 ಸೋಂಕು ಪೀಡಿತ ಪ್ರಕರಣಗಳು ದೃಢಪಟ್ಟಿದ್ದು, ಚೀನಾದಾದ್ಯಂತ 31,161 ಜನರಿಗೆ ಸೋಂಕು ತಗುಲಿದೆ ಎಂದು ಸರ್ಕಾರ ತಿಳಿಸಿದೆ.

ವೈರಸ್ ಹರಡುವಿಕೆಗೆ ಕಾರಣವಾಗಿರುವ ಕೇಂದ್ರೀಯ ಪ್ರಾಂತ್ಯ ಹುಬೆಯಲ್ಲಿ ಕೊರೊನಾ ವೈರಸ್‌ ಸಾವು ನೋವು ಹೆಚ್ಚುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 69 ಹೊಸ ಸಾವುಗಳು ಸಂಭವಿಸಿವೆ. ಸೋಂಕು ತಗುಲಿರುವವರಲ್ಲಿ ಸುಮಾರು 4,800ಕ್ಕೂ ಅಧಿಕ ಜನರು ಗಂಭೀರ ಸ್ಥಿತಿಯಲ್ಲಿಯಲ್ಲಿದ್ದಾರೆ ಎಂದು ಹೇಳಲಾಗಿದೆ.

ಸೋಂಕು ವ್ಯಾಪಿಸುತ್ತಿರುವುದನ್ನು ತಡೆಯಲು ದಶಲಕ್ಷಕ್ಕೂ ಅಧಿಕ ಜನರನ್ನು ಮನೆಯಿಂದ ಹೊರಬರದಂತೆ ನಿರ್ಬಂಧ ವಿಧಿಸಿದ್ದರೂ ಕೂಡ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಅಧಿಕಾರಿಗಳು ಪರದಾಡುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ದಿನದಿಂದ ದಿನಕ್ಕೆ ಸೋಂಕು ಪೀಡಿತರು ಹೆಚ್ಚಾಗುತ್ತಿರುವುದರಿಂದಾಗಿ ಚಿಕಿತ್ಸೆ ನೀಡಲು ಹೆಣಗಾಡುತ್ತಿದ್ದಾರೆ.

ಸೋಂಕು ವ್ಯಾಪಿಸಲು ಪ್ರಾರಂಭವಾದ ಬಳಿಕ ಒಂದೇ ದಿನದಲ್ಲಿ ಮೊದಲ ಬಾರಿಗೆ ಅಧಿಕ ಸಂಖ್ಯೆಯ ರೋಗಿಗಳು ಬುಧವಾರ ಮೃತಪಟ್ಟಿದ್ದರು. ಬುಧವಾರ ಮೃತಪಟ್ಟ 73 ಜನರ ಪೈಕಿ ಹುಬೆ ಪ್ರಾಂತ್ಯದ 70 ಜನರಿದ್ದರು.

ಕಳೆದ ಡಿಸೆಂಬರ್‌ನಲ್ಲಿ ವುಹಾನ್‌ನಲ್ಲಿ ಕೊರೊನಾ ಸೋಂಕಿನ ಮೊದಲ ಪ್ರಕರಣ ಕಾಣಿಸಿಕೊಂಡಿತ್ತು. ಬಳಿಕ ಚೀನಾದಾದ್ಯಂತ ವ್ಯಾಪಿಸಿದ್ದಲ್ಲದೆ, 12ಕ್ಕೂ ಅಧಿಕ ರಾಷ್ಟ್ರಗಳಿಗೂ ವ್ಯಾಪಿಸಿದೆ. ಇದಲ್ಲದೆ 26 ಸಾವಿರಕ್ಕೂ ಅಧಿಕ ಜನರಿಗೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ ಎಂದು ಆರೋಗ್ಯ ಆಯೋಗ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT