ಗುರುವಾರ , ಜೂಲೈ 9, 2020
28 °C

ಕೊರೊನಾ ಸೋಂಕಿನ ಸ್ಫೋಟ: ಡಬ್ಲ್ಯೂಎಚ್‌ಒ ಎಚ್ಚರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ವಿಶ್ವಸಂಸ್ಥೆ: ಭಾರತದಲ್ಲಿ ಈವರೆಗೆ ಕೊರೊನಾ ವೈರಸ್‌ ಸೋಂಕಿನ ಸ್ಫೋಟ ಸಂಭವಿಸದೇ ಇರಬಹುದು. ಆದರೆ, ಅದು ಸಂಭವಿಸುವ ಅಪಾಯವನ್ನು ತಳ್ಳಿ ಹಾಕುವಂತಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ಕಾರ್ಯಕ್ರಮಗಳ ಕಾರ್ಯನಿರ್ವಾಹಕ ನಿರ್ದೇಶಕ ಮೈಕೆಲ್‌ ರ‍್ಯಾನ್‌ ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ. 

ಭಾರತದಲ್ಲಿ ಲಾಕ್‌ಡೌನ್‌ ಹಂತ ಹಂತವಾಗಿ ತೆರವುಗೊಳ್ಳುತ್ತಿರುವುದರಿಂದ ಈ ಮೂರು ವಾರಗಳ ಕಾಲ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳಬಹುದು. ಭಾರತದ ನಗರ ಹಾಗೂ ಹಳ್ಳಿಗಳಲ್ಲಿ ಈ ಸೋಂಕಿನ ಪ್ರಸರಣ ವಿಭಿನ್ನವಾಗಿದೆ ಎಂದು ಹೇಳಿದ್ದಾರೆ. 

ಕೇವಲ ಭಾರತವಷ್ಟೆ ಅಲ್ಲ ದೊಡ್ಡ ಜನಸಂಖ್ಯೆ ಇರುವ ದಕ್ಷಿಣ ಏಷ್ಯಾದ ದೇಶಗಳಾದ ಬಾಂಗ್ಲಾ, ಪಾಕಿಸ್ತಾನಗಳಲ್ಲಿಯೂ ಸೋಂಕಿತರ ಸಂಖ್ಯೆ ಒಮ್ಮೆಲೆ ಹೆಚ್ಚಾಗುವ ಅಪಾಯವಿದೆ ಎಂದೂ ಹೇಳಿದ್ದಾರೆ. 

‘ಸೋಂಕು ಹೆಚ್ಚಳವಾಗುವ ದರ ಹಾಗೂ ಎಷ್ಟು ದಿನಗಳಲ್ಲಿ ಈ ಪ್ರಮಾಣ ದ್ವಿಗುಣವಾಗುತ್ತದೆ ಎಂಬುದರ ಮೇಲೆ ಭಾರತ ನಿಗಾ ಇಡುವುದು ಅವಶ್ಯ‘ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್‌ ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು