ಬ್ಯಾಂಕಾಕ್: ಕೊರೊನಾ ವೈರಸ್ ಸೋಂಕಿತ ವ್ಯಕ್ತಿಯೊಬ್ಬ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದಾಗಿಥಾಯ್ಲೆಂಡ್ ಸರ್ಕಾರ ಬುಧವಾರಪ್ರಕಟಿಸಿದೆ.

ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ50 ವರ್ಷದ ವ್ಯಕ್ತಿಗೆ ಇಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಆ ವ್ಯಕ್ತಿ ಸಂಪೂರ್ಣವಾಗಿ ಗುಣಮುಖನಾಗಿದ್ದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದುಥಾಯ್ಲೆಂಡ್ ದೇಶದ ಆರೋಗ್ಯ ಸಚಿವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಗುಣಮುಖನಾಗಿರುವ ವ್ಯಕ್ತಿ ಟ್ಯಾಕ್ಸಿ ಚಾಲಕನಾಗಿದ್ದು ಚೀನಾ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಎಂದು ಅವರು ಮಾಹಿತಿ ನೀಡಿದ್ದಾರೆ.

ಕೊರೊನಾ ಸೋಂಕಿನಿಂದ ಗಂಭೀರ ಪರಿಸ್ಥಿತಿಯಲ್ಲಿದ್ದ 9 ಜನರ ಪೈಕಿ ಟ್ಯಾಕ್ಸಿ ಚಾಲಕ ಗುಣಮುಖನಾಗಿದ್ದು ಇತರರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಅವರೂ ಕೂಡ ಗುಣಮುಖರಾಗಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

ಟ್ಯಾಕ್ಸಿ ಚಾಲಕನ ಸಂಬಂಧಿಕರು ಮತ್ತು ಆಪ್ತರನ್ನು ಪರೀಕ್ಷೆಗೆ ಒಳಪಡಿಸಿದ್ದು ಅವರಲ್ಲಿ ಯಾರಿಗೂ ಕೊರೊನಾ ವೈರಸ್ ಸೋಂಕುಪತ್ತೆಯಾಗಿಲ್ಲ ಎಂದು ಸಚಿವರು ಖಚಿತಪಡಿಸಿದ್ದಾರೆ.

ಇಲ್ಲಿಯವರೆಗೂ ಚೀನಾದಿಂದ 138ಥಾಯ್ಲೆಂಡ್ ಪ್ರಜೆಗಳನ್ನು ವಿಶೇಷ ವಿಮಾನಗಳ ಮೂಲಕ ಸ್ವದೇಶಕ್ಕೆ ಕರೆತರಲಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ನಾಲ್ಕು ಜನರನ್ನು ಚೀನಾದಲ್ಲೇ ಬಿಟ್ಟು ಬರಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕೊರೊನಾ ವೈರಸ್ ಪೀಡಿತರಿಗೆ ನೀಡುತ್ತಿರುವ ಔಷಧಿ ಮತ್ತು ಚಿಕಿತ್ಸೆ ವಿಧಾನ ಯಾವುದು ಎಂಬುದರ ಬಗ್ಗೆಥಾಯ್ಲೆಂಡ್ ಸರ್ಕಾರ ಮಾಹಿತಿ ಬಹಿರಂಗಪಡಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.