ಶನಿವಾರ, ಮೇ 30, 2020
27 °C

Covid-19 World Update: ವಿಶ್ವದಾದ್ಯಂತ 3.33 ಲಕ್ಷಕ್ಕೂ ಹೆಚ್ಚು ಸಾವು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Coronavirus

ವಾಷಿಂಗ್ಟನ್: ಜಗತ್ತಿನಾದ್ಯಂತ ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಶುಕ್ರವಾರ ರಾತ್ರಿ ವೇಳೆಗೆ 3.33 ಲಕ್ಷ ದಾಟಿದೆ.

ಜಾನ್ಸ್‌ ಹಾಪ್‌ಕಿನ್ಸ್ ಕೊರೊನಾ ವೈರಸ್ ರಿಸೋರ್ಸ್ ಸೆಂಟರ್ ಮಾಹಿತಿ ಪ್ರಕಾರ, ವಿಶ್ವದಾದ್ಯಂತ ಈವರೆಗೆ 51.28 ಲಕ್ಷ ಜನರಿಗೆ ಸೋಂಕು ತಗುಲಿದ್ದು, 333,489 ಜನ ಮೃತಪಟ್ಟಿದ್ದಾರೆ.

ಅಮೆರಿಕದಲ್ಲಿ ಈವರೆಗೆ 15.55 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ್ದು, 94,729 ಜನ ಸಾವಿಗೀಡಾಗಿದ್ದಾರೆ. ರಷ್ಯಾದಲ್ಲಿ 3.26 ಲಕ್ಷ, ಬ್ರೆಜಿಲ್‌ನಲ್ಲಿ 3.10 ಲಕ್ಷ ಹಾಗೂ ಬ್ರಿಟನ್‌ನಲ್ಲಿ 2.52 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ಈ ದೇಶಗಳಲ್ಲಿ ಕ್ರಮವಾಗಿ 3,249, 20,047 ಮತ್ತು 36,124 ಜನ ಸಾವಿಗೀಡಾಗಿದ್ದಾರೆ.

ಸ್ಪೇನ್‌, ಇಟಲಿ, ಫ್ರಾನ್ಸ್‌ನಲ್ಲಿ ಸಾವಿನ ಸಂಖ್ಯೆ ಕ್ರಮವಾಗಿ 28,628, 32,486 ಹಾಗೂ 28,218ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು