ಮಂಗಳವಾರ, ಜುಲೈ 27, 2021
24 °C

ಪಾಕಿಸ್ತಾನ: ಲಕ್ಷದ ಗಡಿ ಸಮೀಪಿಸಿದ ಕೋವಿಡ್‌–19 ಪೀಡಿತರ ಸಂಖ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್‌: ಪಾಕಿಸ್ತಾನದಲ್ಲಿ ಕೋವಿಡ್‌–19 ಸೋಂಕು ಪೀಡಿತರ ಸಂಖ್ಯೆ ಲಕ್ಷದ ಗಡಿ ತಲುಪುತ್ತಿದ್ದು, ಇದುವರೆಗೆ 2 ಸಾವಿರಕ್ಕೂ ಅಧಿಕ ಜನರು ಸತ್ತಿದ್ದಾರೆ. 

ಈ ಮಧ್ಯೆ, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್‌ ಅವರು, ಸೋಂಕು ಹರಡುವುದನ್ನು ತಡೆಯಲು ಕಟ್ಟುನಿಟ್ಟಾಗಿ ಲಾಕ್‌ಡೌನ್‌ ಜಾರಿಗೊಳಿಸುವುದನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

‘ಕಟ್ಟುನಿಟ್ಟಿನ ಲಾಕ್‌ಡೌನ್‌ ಘೋಷಣೆಯು ಆರ್ಥಿಕ ವ್ಯವಸ್ಥೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಅಲ್ಲದೆ, ಬಡತನ ಪ್ರಮಾಣವೂ ಹೆಚ್ಚಲಿದೆ’ ಎಂದು ಅವರು ಪ್ರತಿಪಾದಿಸಿದ್ದಾರೆ.

ಭಾನುವಾರ ಬೆಳಿಗ್ಗೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 4,960 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಸೋಂಕು ಪೀಡಿತರ ಸಂಖ್ಯೆ 98,943ಕ್ಕೆ ಏರಿದೆ.

ಇದೇ ಅವಧಿಯಲ್ಲಿ 67 ಜನರು ಸತ್ತಿದ್ದು, ಮೃತರ ಒಟ್ಟು ಸಂಖ್ಯೆಯೂ 2,002ಕ್ಕೆ ಏರಿದೆ ಎಂದು ರಾಷ್ಟ್ರೀಯ ಆರೋಗ್ಯ ಸೇವಾ ಸಚಿವಾಲಯದ ಹೇಳಿಕೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು