ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್–19 ಪರೀಕ್ಷೆ: 45 ನಿಮಿಷದಲ್ಲಿ ಫಲಿತಾಂಶ

Last Updated 29 ಏಪ್ರಿಲ್ 2020, 17:18 IST
ಅಕ್ಷರ ಗಾತ್ರ

ಲಾಸ್‌ ಏಂಜಲ್ಸ್‌: ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕರು ಕೋವಿಡ್‌–19 ಪತ್ತೆಗಾಗಿ ನೂತನ ವಿಧಾನ ಕಂಡು ಹಿಡಿದಿದ್ದು, ಕೇವಲ 45 ನಿಮಿಷಗಳಲ್ಲಿ ಫಲಿತಾಂಶ ದೊರೆಯಲಿದೆ ಎಂದು ಹೇಳಿದ್ದಾರೆ.

‘ಸಾರ್ಸ್‌–ಸಿಒವಿ–2 ಡಿಟೆಕ್ಟರ್‌’ ಎಂದು ಈ ಪರೀಕ್ಷೆಗೆ ಹೆಸರಿಡಲಾಗಿದೆ. ಇದು ಅತ್ಯಂತ ಕಡಿಮೆ ವೆಚ್ಚದ ಪರೀಕ್ಷಾ ವಿಧಾನವಾಗಿದ್ದು, ಸಾರ್ವಜನಿಕ ಆರೋಗ್ಯ ಕ್ಷೇತ್ರಕ್ಕೆ ವರದಾನವಾಗಲಿದೆ ಎಂದು ‘ನೇಚರ್‌ ಬಯೋಟೆಕ್ನಾಲಜಿ’ ಎಂಬ ಜರ್ನಲ್‌ನಲ್ಲಿ ಪ್ರಕಟಗೊಂಡಿರುವ ವರದಿ ಹೇಳಿದೆ.

ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಿ, ಈ ವಿಧಾನದ ಕಾರ್ಯಕ್ಷಮತೆಯನ್ನು ಕಂಡುಕೊಳ್ಳಬೇಕಿದೆ. ಇದಕ್ಕೆ ಅಮೆರಿಕದ ಫುಡ್‌ ಆ್ಯಂಡ್‌ ಡ್ರಗ್‌ ಅಡ್ಮಿನಿಷ್ಟ್ರೇಶನ್‌ ನಿಂದ ಅನುಮೋದನೆ ಸಿಗಬೇಕಿದೆ ಎಂದೂ ವರದಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT