ಶನಿವಾರ, ಮೇ 30, 2020
27 °C

Covid-19 World Update: ವಿಶ್ವದಾದ್ಯಂತ 3.16 ಲಕ್ಷ ದಾಟಿದ ಸಾವಿನ ಸಂಖ್ಯೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಜಾಗತಿಕ ಪಿಡುಗು ಕೋವಿಡ್‌–19 ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಸಾಗಿದ್ದು, ವಿಶ್ವದಾದ್ಯಂತ ಇದುವರೆಗೆ 3,16,658 ಜನರು ಮೃತಪಟ್ಟಿದ್ದಾರೆ ಎಂದು ಅಂತರರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.

ವಿಶ್ವದ 213 ರಾಷ್ಟ್ರಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 48 ಲಕ್ಷ ದಾಟಿದೆ. ಸುಮಾರು 18.57 ಲಕ್ಷ ಜನರು ಗುಣಮುಖರಾಗಿದ್ದಾರೆ. ಉಳಿದಂತೆ 26 ಲಕ್ಷ ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಮೆರಿಕಾದಲ್ಲಿ ಸೋಂಕಿತರ ಸಂಖ್ಯೆ 15.27 ಲಕ್ಷ ದಾಟಿದ್ದು, ಮೃತಪಟ್ಟವರ ಸಂಖ್ಯೆ 90 ಸಾವಿರಕ್ಕೆ ಏರಿಕೆಯಾಗಿದೆ. 3.46 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ. ರಷ್ಯಾದಲ್ಲಿ ಇದುವರೆಗೆ 2.81 ಜನರಲ್ಲಿ ಸೋಂಕು ಇರುವುದು ಖಚಿತವಾಗಿದೆ. ಅದರಲ್ಲಿ, 2,631 ಸೋಂಕಿತರು ಮೃತಪಟ್ಟಿದ್ದಾರೆ.

ಸ್ಪೇನ್‌ನಲ್ಲಿ ಸೋಂಕಿತರ ಸಂಖ್ಯೆ 2.77 ದಾಟಿದ್ದು 27 ಸಾವಿರ ಮಂದಿ ಸಾವಿಗೀಡಾಗಿದ್ದಾರೆ. ಇಂಗ್ಲೆಂಡ್‌ ಹಾಗೂ ಬ್ರೆಜಿಲ್‌ನಲ್ಲಿ ಸೋಂಕಿತರ ಸಂಖ್ಯೆ 2.4 ಲಕ್ಷಕ್ಕೆ ಏರಿಕೆಯಾಗಿದ್ದು, ಈ ದೇಶಗಳಲ್ಲಿ ಕ್ರಮವಾಗಿ 34 ಸಾವಿರ ಮತ್ತು 16 ಸಾವಿರ ಜನರು ಮೃತಪಟ್ಟಿದ್ದಾರೆ.

ಕೊರೊನಾವೈರಸ್‌ ಮೊದಲು ಕಾಣಿಸಿಕೊಂಡ ಚೀನಾದಲ್ಲಿ ಈವರೆಗೆ 82,947 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಆ ದೇಶದಲ್ಲಿ 4,633 ಜನರು ಸಾವನ್ನಪ್ಪಿದ್ದಾರೆ.

ಭಾರತದಲ್ಲಿ 96,169 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಟ್ಟು 36,823 ಜನರು ಗುಣಮುಖರಾಗಿದ್ದು, 3,029 ಸೋಂಕಿತರು ಸಾವನ್ನಪ್ಪಿದ್ದಾರೆ. ಉಳಿದಂತೆ 56,316 ಸೋಂಕಿತರು ದೇಶದಾದ್ಯಂತ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು