ಭಾನುವಾರ, ಜುಲೈ 25, 2021
22 °C

Covid-19 World Update: ಜರ್ಮನಿಯಲ್ಲಿ ಸೋಂಕಿತರ ಸಂಖ್ಯೆ 1,86,269ಕ್ಕೆ ಏರಿಕೆ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

AFP photo

ವಾಷಿಂಗ್ಟನ್: ಜರ್ಮನಿಯಲ್ಲಿ  ಭಾನುವಾರ 247 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 1,86 ,269 ಆಗಿದೆ ಎಂದು ರಾಬರ್ಟ್ ಕೋಚ್ ಇನ್ಸಿಟ್ಯೂಟ್ (ಆರ್‌ಕೆಐ) ಹೇಳಿದೆ. ಕಳೆದ 24 ಗಂಟೆಗಳಲ್ಲಿ 8 ಮಂದಿ ಸಾವಿಗೀಡಾಗಿದ್ದು ಸಾವಿಗೀಡಾದವರ ಸಂಖ್ಯೆ 8,787 ಆಗಿದೆ.

ಮೆಕ್ಸಿಕೊದಲ್ಲಿ 3,494 ಹೊಸ ಪ್ರಕರಣಗಳು ವರದಿ ಆಗಿದೆ. ರಷ್ಯಾದಲ್ಲಿ 8,835 ಹೊಸ ಪ್ರಕರಣಗಳು ವರದಿ ಆಗಿದ್ದು, ಸೋಂಕಿತರ ಸಂಖ್ಯೆ 528964 ಆಗಿದೆ. ಕಳೆದ 24 ಗಂಟೆಗಳಲ್ಲಿ 119 ಮಂದಿ ಸಾವಿಗೀಡಾಗಿದ್ದು ಇಲ್ಲಿಯವರೆಗೆ  ಮೃತಪಟ್ಟವರ ಸಂಖ್ಯೆ  6,948 ಆಗಿದೆ.

ಬ್ರೆಜಿಲ್‌ನಲ್ಲಿ ಸೋಂಕಿತರ ಸಂಖ್ಯೆ 850514 ಆಗಿದ್ದು ಇಲ್ಲಿಯವರೆಗೆ 42,720 ಮಂದಿ ಸಾವಿಗೀಡಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 21,704 ಹೊಸ ಪ್ರಕರಣಗಳು ವರದಿ ಆಗಿದ್ದು 892 ಮಂದಿ ಸಾವಿಗೀಡಾಗಿದ್ದಾರೆ.

ಜೂನ್ 13ರಂದು ಚೀನಾದಲ್ಲಿ 57 ಹೊಸ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 9 ರೋಗ ಲಕ್ಷಣಗಳಿಲ್ಲದ ಪ್ರಕರಣಗಳು ಆಗಿವೆ ಎಂದು ರಾಷ್ಟ್ರೀಯ ಆರೋಗ್ಯ ಸಂಸ್ಥೆ ಹೇಳಿದೆ .

ಅಮೆರಿಕದಲ್ಲಿ ಕಳೆದ 24 ಗಂಟೆಗಳಲ್ಲಿ 734 ಮಂದಿ ಸಾವಿಗೀಡಾಗಿದ್ದಾರೆ ಎಂದು ಜಾನ್ಸ್ ಹಾಪ್ಕಿನ್ಸ್ ಅಂಕಿಅಂಶಗಳು ಹೇಳಿವೆ. ಶನಿವಾರದವರೆಗೆ ಇಲ್ಲಿ 115, 347 ಮಂದಿ ಮೃತಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು