ಶನಿವಾರ, ಮೇ 30, 2020
27 °C

ಕೊರೊನಾ ಸೋಂಕು ಹಿನ್ನೆಲೆ: ಇಂಗ್ಲೆಂಡ್‌ನಲ್ಲಿ ಭಾರತ ಮೂಲದ ವೈದ್ಯ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಡನ್‌: ಕೊರೊನಾ ವೈರಸ್‌ ಸೋಂಕಿಗೆ ಇಂಗ್ಲೆಂಡ್‌ನಲ್ಲಿ ಭಾರತ ಮೂಲದ ವೈದ್ಯರೊಬ್ಬರು ಬಲಿಯಾಗಿದ್ದಾರೆ.

ಸಾವಿಗೀಡಾದ ವೈದ್ಯ ಜಿತೇಂದ್ರ ಕುಮಾರ್‌ ರಾಥೋಡ್‌ ಅವರು ವೇಲ್ಸ್‌ ವಿಶ್ವವಿದ್ಯಾಲಯ ಅಧೀನದಲ್ಲಿ ಬರುವ ಆಸ್ಪತ್ರೆಯಲ್ಲಿ ಕಾರ್ಡಿಯೊ ಥೋರಾಸಿಸ್‌ ಸರ್ಜರಿ ವಿಭಾಗದಲ್ಲಿ ಸಹಾಯಕ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಅಲ್ಲಿನ ರಾಷ್ಟ್ರೀಯ ಆರೋಗ್ಯ ಸೇವಾ ಸಂಸ್ಥೆಯು ರಾಥೋಡ್‌ ಅವರನ್ನು ಅತ್ಯುತ್ತಮ ಶಸ್ತ್ರ ಚಿಕಿತ್ಸಕರೆಂದೇ ಗುರುತಿಸಿತ್ತು.

ರಾಥೋಡ್‌ ಅವರ ಸಾವಿಗೆ ವಿಶ್ವವಿದ್ಯಾಲಯವು ತೀವ್ರ ಸಂತಾಪ ಸೂಚಿಸಿದ್ದು, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದೆ.

58 ವರ್ಷದ ರಾಥೋಡ್‌ ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. 
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು