ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತಕ್ಕೆ ವೆಂಟಿಲೇಟರ್ ದಾನ ನೀಡುತ್ತೇವೆ, ಮೋದಿ ಜತೆ ನಿಲ್ಲುತ್ತೇವೆ: ಟ್ರಂಪ್‌

Last Updated 16 ಮೇ 2020, 2:19 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಕೋವಿಡ್‌-19 ವಿರುದ್ಧದ ಹೋರಾಟದಲ್ಲಿ ತಮ್ಮ ದೇಶವು ಭಾರತಕ್ಕೆ ವೆಂಟಿಲೇಟರ್‌ಗಳನ್ನು ದಾನ ನೀಡಲಿದೆಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಟ್ವೀಟ್ ಮಾಡಿದ್ದಾರೆ.

'ಈ ಜಾಗತಿಕ ಪಿಡುಗಿನ ಸಮಯದಲ್ಲಿ ನಾವು ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನಿಲ್ಲುತ್ತೇವೆ' ಎಂದು ಅವರು ತಿಳಿಸಿದ್ದಾರೆ.

ಕೋವಿಡ್‌-19 ಗೆ ಲಸಿಕೆ ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಅಮೆರಿಕ- ಭಾರತದೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಟ್ರಂಪ್‌ ಹೇಳಿದ್ದಾರೆ.

'ಭಾರತದಲ್ಲಿರುವ ನಮ್ಮ ಸ್ನೇಹಿತರಿಗೆ ಅಮೆರಿಕವು ವೆಂಟಿಲೇಟರ್‌ಗಳನ್ನು ದಾನ ನೀಡಲಿದ್ದೇವೆ. ಈ ಬಗ್ಗೆನನಗೆ ಹೆಮ್ಮೆ ಇದೆ. ಜಾಗತಿಕ ಪಿಡುಗಿನ ಈ ಸಂದರ್ಭದಲ್ಲಿ ನಾವು, ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನಿಲ್ಲುತ್ತೇವೆ. ಲಸಿಕೆ ಅಭಿವೃದ್ಧಿಗೆ ನಾವು ಸಹಕರಿಸುತ್ತಿದ್ದೇವೆ. ನಾವು ಒಟ್ಟಾಗಿ ಅದೃಶ್ಯ ಶತ್ರುವನ್ನು ಸೋಲಿಸುತ್ತೇವೆ!' ಎಂದು ತಮ್ಮ ಅಧಿಕೃತ ಟ್ವೀಟರ್‌ ಖಾತೆಯಲ್ಲಿ ಡೊನಾಲ್ಡ್‌ ಟ್ರಂಪ್‌ ಬರೆದುಕೊಂಡಿದ್ದಾರೆ.

ಶ್ವೇತಭವನದ ರೋಸ್ ಗಾರ್ಡನ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಟ್ರಂಪ್‌, 'ನಾವು ಭಾರತದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ. ಈ ವರ್ಷದ ಅಂತ್ಯದ ವೇಳೆಗೆ ಕೊರೊನಾ ವೈರಸ್ ಲಸಿಕೆಯನ್ನು ಅಭಿವೃದ್ಧಿಪಡಿಸಲು ಅಮೆರಿಕ ಹಾಗೂ ಭಾರತ ಸಹಕರಿಸಲಿವೆ. ತಮ್ಮ ದೇಶವು ಭಾರತಕ್ಕೆ ವೆಂಟಿಲೇಟರ್‌ಗಳನ್ನು ದಾನ ಮಾಡಲಿದೆ' ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT