ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ: 20 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ

Last Updated 12 ಏಪ್ರಿಲ್ 2020, 20:02 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಮೆರಿಕದ‌ಲ್ಲಿ ಕೋವಿಡ್‌–19 ಸಾವಿನ ಪ್ರಕರಣಗಳು 20 ಸಾವಿರದ ಗಡಿ ದಾಟಿದ್ದು, ಇದು ಇಟಲಿ ಸೇರಿದಂತೆ ವಿಶ್ವದ ಯಾವುದೇ ರಾಷ್ಟ್ರಗಳಿಗಿಂತ ಅತ್ಯಧಿಕವಾಗಿದೆ.

ಅಮೆರಿಕದಲ್ಲಿ ಮೃತಪಟ್ಟವರ ಸಂಖ್ಯೆ 21,489 ಆಗಿದ್ದರೆ, ಇಟಲಿಯಲ್ಲಿ 19,899 ಜನ ಸತ್ತಿದ್ದಾರೆ ಎಂದು ಜಾನ್‌ ಹಾಪ್‌ಕಿನ್ಸ್ ವಿಶ್ವವಿದ್ಯಾಲಯ ತಿಳಿಸಿದೆ.

ಅಮೆರಿಕದಲ್ಲಿ ಒಟ್ಟು 5.3 ಲಕ್ಷ ಜನರಿಗೆ ಸೋಂಕು ತಗುಲಿದೆ. ವಿಶ್ವದ ಆರ್ಥಿಕ ರಾಜಧಾನಿ ಎಂದೇ ಖ್ಯಾತಿ ಪಡೆದಿರುವ ನ್ಯೂಯಾರ್ಕ್‌ ಕೊರೊನಾ ವೈರಾಣುವಿನ ಕೇಂದ್ರ ಸ್ಥಾನವಾಗಿ ಪರಿಣಮಿಸಿದೆ. ಇಲ್ಲಿ ಈಗಾಗಲೇ 8,627 ಮಂದಿ ಸತ್ತಿದ್ದರೆ, 1.80 ಲಕ್ಷರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೋವಿಡ್‌–19 ಗಂಭೀರ ಪರಿಣಾಮ ಬೀರುತ್ತಿರುವುದರಿಂದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್, ಅಮೆರಿಕದ ಎಲ್ಲ 50 ರಾಜ್ಯಗಳಲ್ಲಿಯೂ ರಾಷ್ಟ್ರೀಯ ತುರ್ತುಸ್ಥಿತಿ ಘೋಷಿಸಿದ್ದು, ತುರ್ತು ಕಾರ್ಯಗಳನ್ನುಕೈಗೊಳ್ಳಲು 50 ಸಾವಿರ ಯೋಧರನ್ನು ನಿಯೋಜಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT