ಶುಕ್ರವಾರ, ಆಗಸ್ಟ್ 6, 2021
22 °C
ಕರಾಚಿಯಲ್ಲಿ ಪತನಾಗಿದ್ದ ವಿಮಾನ ಪತನ ಪ್ರಕರಣ

ಎಟಿಸಿ ಸೂಚನೆ ಪಾಲಿಸದ ಪೈಲಟ್‌: ಸಿಎಎ

ಪಿಟಿಐ Updated:

ಅಕ್ಷರ ಗಾತ್ರ : | |

ಕರಾಚಿ: ಏರ್‌ ಟ್ರಾಫಿಕ್‌ ಕಂಟ್ರೋಲರ್‌ (ಎಟಿಸಿ) ಸೂಚನೆಗಳನ್ನು ಪೈಲಟ್‌ ಪಾಲಿಸದ ಕಾರಣದಿಂದಾಗಿಯೇ ಪಾಕಿಸ್ತಾನ ಇಂಟರ್‌ನ್ಯಾಷನಲ್‌ ಏರ್‌ಲೈನ್ಸ್‌ನ ವಿಮಾನ ಕಳೆದ ತಿಂಗಳು ಅಪಘಾತಕ್ಕಿಡಾಯಿತು ಎಂದು ಪಾಕಿಸ್ತಾನದ ನಾಗರಿಕ ವಿಮಾನಯಾನ ಪ್ರಾಧಿಕಾರ(ಸಿಎಎ) ತಿಳಿಸಿದೆ.

ಕರಾಚಿ ವಿಮಾನ ನಿಲ್ದಾಣದ ಬಳಿಯ ಜನವಸತಿ ಪ್ರದೇಶದಲ್ಲಿ ಈ ವಿಮಾನ ಪತನಾಗಿತ್ತು. 98 ಮಂದಿ ಈ ದುರಂತದಲ್ಲಿ ಸಾವಿಗೀಡಾಗಿದ್ದರು.

ಕಡಿಮೆ ಎತ್ತರದಲ್ಲಿ ಹಾರಾಟ ನಡೆಸುವ ಬಗ್ಗೆ ಪೈಲಟ್‌ಗೆ ಎರಡು ಬಾರಿ ಸೂಚನೆ ನೀಡಲಾಗಿತ್ತು. ಆದರೆ, ಪೈಲಟ್‌ ನಿರ್ದೇಶನಗಳನ್ನು ಪಾಲಿಸಲಿಲ್ಲ ಎಂದು ಪ್ರಾಧಿಕಾರ ತಿಳಿಸಿದೆ.

ಪ್ರಾಧಿಕಾರದ ವರದಿಗೆ ಪಾಕಿಸ್ತಾನ ಏರ್‌ಲೈನ್ಸ್‌ ಪೈಲಟ್‌ಗಳ ಸಂಘಟನೆ ಆಕ್ಷೇಪ ವ್ಯಕ್ತಪಡಿಸಿದೆ. ಅಪಘಾತದ ಬಗ್ಗೆ ಕೆಲವು ವಿವರಗಳನ್ನು ಬಹಿರಂಗಪಡಿಸುವ ಮೂಲಕ ತನಿಖೆ ಮೇಲೆ ಪ್ರಭಾವ ಬೀರುವ ಯತ್ನ ಮಾಡಲಾಗಿದೆ ಎಂದು ದೂರಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು