ಶನಿವಾರ, ಜನವರಿ 18, 2020
26 °C

ಇಂಡೋನೇಷ್ಯಾ ಪ್ರವಾಹಕ್ಕೆ 30 ಬಲಿ

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಜಕಾರ್ತಾ: ಇಂಡೋನೇಷ್ಯಾದಲ್ಲಿ ಪ್ರವಾಹದಿಂದಾಗಿ 30ಕ್ಕೂ ಹೆಚ್ಚು ಜನರು ಸಾವನ್ನಪಿದ್ದು, ಕೆಲವರು ನಾಪತ್ತೆಯಾಗಿದ್ದಾರೆ. ಇನ್ನೂ ಹಲವರು ತಮ್ಮ ಪ್ರಾಣ ಕಳೆದುಕೊಂಡಿರುವ ಸಾಧ್ಯತೆ ಇದೆ ಎಂದು ಇಂಡೋನೇಷ್ಯಾ ವಿಪತ್ತು ಸಂಸ್ಥೆ ಆತಂಕ ವ್ಯಕ್ತಪಡಿಸಿದೆ.  

ಪ್ರವಾಹದಲ್ಲಿ ಸಾವಿರಾರು ಜನರು ಮನೆಗಳನ್ನು ಕಳೆದುಕೊಂಡಿದ್ದಾರೆ. 30 ಲಕ್ಷಕ್ಕೂ ಹೆಚ್ಚು ನಿರಾಶ್ರಿತರಿಗಾಗಿ ಹಲವೆಡೆ ಪರಿಹಾರ ಕೇಂದ್ರ ಮತ್ತು ಮನೆಗಳ ವ್ಯವಸ್ಥೆ ಮಾಡಲಾಗಿದೆ. ಮಳೆಯಿಂದಾಗಿ ಮನೆ ಒಳಗೆ ಸಿಲುಕಿರುವವರನ್ನು ಹೊರ ತೆಗೆಯುವ ಕಾರ್ಯದಲ್ಲಿ ರಕ್ಷಣಾ ಪಡೆ ನಿರತವಾಗಿದೆ.

ಈವರೆಗೆ ಪ್ರವಾಹ ಪೀಡಿತ ಸ್ಥಳಗಳಿಂದ ಸುಮಾರು  31,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು. 

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು