ಶುಕ್ರವಾರ, ಡಿಸೆಂಬರ್ 13, 2019
26 °C

ಬುಲ್‌ಬುಲ್‌ ಚಂಡಮಾರುತ: ಬಾಂಗ್ಲಾದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಢಾಕಾ: ಬಾಂಗ್ಲಾದೇಶದಲ್ಲಿ ಬುಲ್‌ಬುಲ್‌ ಚಂಡಮಾರುತದ ಅಬ್ಬರ ಮುಂದುವರಿದಿದೆ. ಮೃತರ ಸಂಖ್ಯೆ 13 ಕ್ಕೆ ಏರಿಕೆಯಾಗಿದ್ದು, 20 ಜನ ಗಾಯಗೊಂಡಿದ್ದಾರೆ.

ಮನೆಗಳು ಕುಸಿದುಬಿದ್ದಿದ್ದು, ಮರಗಳು ಬುಡಮೇಲಾಗಿವೆ. ಇದರಿಂದ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. 

ಬಾಂಗ್ಲಾದೇಶದಲ್ಲಿ ಭಾನುವಾರ ಸಂಜೆ ಹೊತ್ತಿಗೆ ಚಂಡಮಾರುತ ಅಪ್ಪಳಿಸಿದ್ದು, ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಸಂಜೆಯ ನಂತರ ಚಂಡಮಾರುತ ವಾಯುಭಾರ ಕುಸಿತವಾಗಿ ಮಾರ್ಪಾಡಾಗಿತ್ತು. ಗಾಳಿ–ಮಳೆಯಿಂದಾಗಿ 5 ಸಾವಿರ ಮಳೆಗಳಿಗೆ ಹಾನಿಯಾಗಿದೆ. ದಕ್ಷಿಣ ಬಾಂಗ್ಲಾದಲ್ಲೇ ಚಂಡಮಾರುತದಿಂದ ಭಾರಿ ಹಾನಿಯಾಗಿದೆ. 

ಆಳ ಸಮುದ್ರ ಮೀನುಗಾರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಮುಂದಿನ 24 ಗಂಟೆಗಳವರೆಗೆ ಕರಾವಳಿ ಭಾಗದ
ವಿಮಾನ ಹಾರಾಟ ನಿಲ್ಲಿಸಲಾಗಿದೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು