ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಲ್ಲದ ಕೊರೊನಾ ವೈರಸ್ ದಾಳಿ; ಸೋಂಕಿಗೆ ಬಲಿಯಾದವರ ಸಂಖ್ಯೆ 2,118ಕ್ಕೆ ಏರಿಕೆ

Last Updated 20 ಫೆಬ್ರುವರಿ 2020, 6:07 IST
ಅಕ್ಷರ ಗಾತ್ರ

ಬೀಜಿಂಗ್: ಚೀನಾದಲ್ಲಿ ತಲೆನೋವಿಗೆ ಕಾರಣವಾಗಿರುವ ಮಾರಣಾಂತಿಕ ಕೊರೊನಾ ವೈರಸ್‌ಗೆ ಮತ್ತಷ್ಟು ಜನರು ಬಲಿಯಾಗಿದ್ದಾರೆ. 114 ಹೊಸ ಸಾವುಗಳು ಸಂಭವಿಸಿದ್ದು, ಮೃತಪಟ್ಟವರ ಸಂಖ್ಯೆಯು 2,118ಕ್ಕೆ ಏರಿಕೆಯಾಗಿದೆ.

394 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದುವರೆಗೂ 74,576 ಮಂದಿ ಕೊರೊನಾ ವೈರಸ್ ಸೋಂಕು ಪೀಡಿತರಾಗಿದ್ದಾರೆ ಎಂದು ಚೀನಾದ ಅಧಿಕಾರಿಗಳು ತಿಳಿಸಿದ್ದಾರೆ.

ಚೀನಾದ 31 ಪ್ರಾಂತ್ಯಗಳಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ, 114 ಜನರು ವೈರಸ್‌ ದಾಳಿಗೆ ಮೃತಪಟ್ಟಿದ್ದಾರೆ. ಒಟ್ಟಾರೆ 74,576 ಜನರಿಗೆ ಸೋಂಕು ತಗುಲಿದ್ದು, 2,118 ಜನರು ಕಳೆದ ಡಿಸೆಂಬರ್‌ನಿಂದ ಈಚೆಗೆ ಸಾವಿಗೆ ಕೊರಳೊಡ್ಡಿದ್ದಾರೆ ಎಂದು ಗುರುವಾರ ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.

4,922 ಜನರಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ವೈರಸ್ ಹೊಡೆತಕ್ಕೆ ತೀವ್ರವಾಗಿ ಸಿಲುಕಿದ್ದ ಹುಬೆ ಪ್ರಾಂತ್ಯದಲ್ಲಿ ಹೊಸದಾಗಿ 349 ಜನರಲ್ಲಿ ಸೋಂಕಿರುವುದು ದೃಢಪಟ್ಟಿದ್ದು, ಈ ಮೂಲಕ 62,031ಪ್ರಕರಣಗಳಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಹುಬೆಯಲ್ಲಿ 108 ಜನರು ಮೃತಪಟ್ಟಿದ್ದರೆ, ಹೆಬೆ, ಶಾಂಗ್ರೈ, ಫುಜಿಯನ್, ಶಾಂಡೋಂಗ್, ಯುನ್ನಾನ್ ಮತ್ತು ಶಾಂಕ್ಷಿಯಲ್ಲಿ ತಲಾ ಒಬ್ಬೊಬ್ಬರು ಬಲಿಯಾಗಿದ್ದಾರೆ.

ಬುಧವಾರ ಲಭ್ಯವಾದ ಮಾಹಿತಿ ಪ್ರಕಾರ, ಚೀನಾವಲ್ಲದೆ ಹಾಂಗ್‌ ಕಾಂಗ್‌ನಲ್ಲಿ 65 ಪ್ರಕರಣಗಳಲ್ಲಿ ಸೋಂಕು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ತೈವಾನ್‌ನಲ್ಲಿ 24 ಸೋಂಕು ಪೀಡಿತ ಪ್ರಕರಣಗಳು ಪತ್ತೆಯಾಗಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT