ಬುಧವಾರ, ಆಗಸ್ಟ್ 4, 2021
26 °C

ಗಾಂಧಿ ಪ್ರತಿಮೆ ವಿರೂಪ: ನಾಚಿಕೆಗೇಡಿನ ಕ್ರಮ ಎಂದು ಅಧ್ಯಕ್ಷ ಟ್ರಂಪ್‌ ಟೀಕೆ

ಪಿಟಿಐ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ‘ಇಲ್ಲಿರುವ ಮಹಾತ್ಮಾಗಾಂಧಿ ಅವರ ಪ್ರತಿಮೆಯನ್ನು ವಿರೂಪಗೊಳಿಸಿರುವ ವರ್ತನೆ ನಾಚಿಕೆಗೇಡಿನದು’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಟೀಕಿಸಿದ್ದಾರೆ.

ಆಫ್ರಿಕನ್‌–ಅಮೆರಿಕದ ಪ್ರಜೆ ಜಾರ್ಜ್‌ ಫ್ಲಾಯ್ಡ್‌ ಸಾವು ಪ್ರಕರಣ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆಯ ವೇಳೆ ಕಿಡಿಗೇಡಿಗಳು ಈ ಪ್ರತಿಮೆಗೆ ಬಣ್ಣ ಬಳಿದು, ಘೋಷಣೆ ಬರೆದು ವಿರೂಪಗೊಳಿಸಿದ್ದರು.

ಜೂನ್‌ 2ರ ಮಧ್ಯರಾತ್ರಿ ಈ ಕೃತ್ಯ ನಡೆದಿದ್ದು, ಭಾರತೀಯ ರಾಯಭಾರ ಕಚೇರಿಯು ಸ್ಥಳೀಯ ಪೊಲೀಸರ ಬಳಿ ಈ ಸಂಬಂಧ ದೂರು ದಾಖಲಿಸಿದೆ. ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಭಾರತೀಯ ರಾಯಭಾರ ಕಚೇರಿ ಒತ್ತಾಯಿಸಿದೆ.

‘ಇದೊಂದು ನಾಚಿಕೆಗಡಿನ ಕ್ರಮ’ ಎಂದು ಟ್ರಂಪ್‌ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು.ಸ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು