ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ: ಮತ್ತೆ ಭೂಕಂಪ, 40 ಸಾವು

Last Updated 14 ಅಕ್ಟೋಬರ್ 2019, 20:15 IST
ಅಕ್ಷರ ಗಾತ್ರ

ಇಸ್ಲಾಮಾಬಾದ್:ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಸೋಮವಾರ ಪ್ರಬಲ ಭೂಕಂಪನಸಂಭವಿಸಿದೆ. ಹಲವರು ಮೃತಪಟ್ಟಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ.

ಭೂಕಂಪನದ ಕೇಂದ್ರವು ಹಿಂದುಕುಷ್ ಪರ್ವತ ಸರಣಿಯ ಅಫ್ಗಾನಿಸ್ತಾನ ಭಾಗದಲ್ಲಿ ಇರುವುದಾಗಿ ಪಾಕಿಸ್ತಾನ ಹವಾಮಾನ
ಇಲಾಖೆ ತಿಳಿಸಿದೆ.ಭೂ ಮೇಲ್ಪದರದ 158 ಕಿ.ಮೀ ಆಳದಲ್ಲಿ ಕಂಪನ ಸಂಭವಿಸಿದೆ ಎಂದು ಅದು ಮಾಹಿತಿ ನೀಡಿದೆ.

‘ಪ್ರಾಂತ್ಯದ ಹಲವು ನಗರಗಳ ಕಟ್ಟಡಗಳು ಕುಸಿದಿದ್ದು, ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿದೆ’ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಪಿಡಿಎಂಎ) ವಕ್ತಾರ ತೈಮೂರ್‌ ಆಲಿ ತಿಳಿಸಿದ್ದಾರೆ.

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಸೆಪ್ಟೆಂಬರ್‌ 24ರಂದು ಭೂಕಂಪ ಸಂಭವಿಸಿತ್ತು. ಇದರಿಂದ ಪಂಜಾಬ್‌, ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಹಲವು ಭಾಗಗಳು ತತ್ತರಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT