ಕ್ಯಾಲಿಫೋರ್ನಿಯಾದಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 7.1ರಷ್ಟು ದಾಖಲು

ಶುಕ್ರವಾರ, ಜೂಲೈ 19, 2019
24 °C

ಕ್ಯಾಲಿಫೋರ್ನಿಯಾದಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 7.1ರಷ್ಟು ದಾಖಲು

Published:
Updated:

ವಾಷಿಂಗ್ಟನ್: ಅಮೆರಿಕದ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಪ್ರಬಲ ಭೂಕಂಪವಾಗಿದ್ದು ಯಾವುದೇ ಸಾವು ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. 

ಕಂಪನ ತೀವ್ರತೆ ರಿಕ್ಟರ್ ಮಾಪಕದಲ್ಲಿ 7.1ರಷ್ಟು ದಾಖಲಾಗಿದೆ. ಲಾಸ್‌ ಎಂಜಲೀಸ್‌ನಿಂದ 125 ಕಿ.ಮೀ ದೂರದಲ್ಲಿರುವ ಡೆತ್ ವ್ಯಾಲಿ ನ್ಯಾಷನಲ್ ಪಾರ್ಕ್‌ನಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ. ಕೇವಲ 10 ಕಿ.ಮೀಟರ್ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಇತ್ತು ಎಂದು ಅಮೆರಿಕದ ಭೂಗರ್ಭ ಸರ್ವೇಕ್ಷಣಾ ಕೇಂದ್ರ ತಿಳಿಸಿದೆ.

ಕಳೆದ 25 ವರ್ಷಗಳಲ್ಲಿ ಸಂಭವಿಸಿದ ಪ್ರಬಲ ಭೂಕಂಪ ಇದಾಗಿದೆ. ಹಲವು ಕಟ್ಟಡಗಳಿಗೆ ಹಾನಿಯಾಗಿದ್ದು ಇಲ್ಲಿಯವರೆಗೂ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. 

ಕಳೆದ ಎರಡು ದಿನಗಳಿಂದಲೂ ಈ ಭಾಗದಲ್ಲೂ ಭೂಮಿ ಕಂಪಿಸುತ್ತಿದೆ ಎಂದು ಭೂಗರ್ಭ ಸರ್ವೇಕ್ಷಣಾ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ. 

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 3

  Sad
 • 1

  Frustrated
 • 2

  Angry

Comments:

0 comments

Write the first review for this !