ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ ಅಡಿ ಎಲ್ಲರಿಗೂ ಸಮಾನ ರಕ್ಷಣೆ ನೀಡಬೇಕು: ಅಮೆರಿಕ

ಅಮೆರಿಕದ ವಿದೇಶಾಂಗ ಸಹಾಯಕ ಕಾರ್ಯದರ್ಶಿ
Last Updated 25 ಜನವರಿ 2020, 19:41 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಪೌರತ್ವ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಎಲ್ಲರಿಗೂ ಸಮಾನ ರಕ್ಷಣೆ ನೀಡಬೇಕು ಎಂದು ಅಮೆರಿಕ ಪ್ರತಿಪಾದಿಸಿದೆ.

ಇತ್ತೀಚೆಗೆ ಭಾರತ ಪ್ರವಾಸ ಕೈಗೊಂಡಿದ್ದ ದಕ್ಷಿಣ ಮತ್ತು ಕೇಂದ್ರ ಏಷ್ಯಾ ವಿಭಾಗದ ವಿದೇಶಾಂಗ ಸಹಾಯಕ ಕಾರ್ಯದರ್ಶಿ ಅಲೈಸ್‌ ವೆಲ್ಸ್‌, ಈ ಕಾಯ್ದೆ ವಿರೋಧಿಸಿ ಭಾರತದಲ್ಲಿ ನಡೆದಿರುವ ಪ್ರತಿಭಟನೆಗಳನ್ನು ಪ್ರಸ್ತಾಪಿಸಿ ಈ ಹೇಳಿಕೆ ನೀಡಿದ್ದಾರೆ.

‘ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಭಾರತ ಭೇಟಿ ಅವಕಾಶ ನೀಡಿತು. ಈ ಕಾಯ್ದೆಯು ಪ್ರಜಾಪ್ರಭುತ್ವ ರೀತಿಯಲ್ಲಿ ಪರಿಶೀಲನೆಗೆ ಒಳಪಡುತ್ತಿದೆ.

ಈ ಬಗ್ಗೆ ವಿರೋಧ ಪಕ್ಷಗಳು, ಮಾಧ್ಯಮಗಳು, ನ್ಯಾಯಾಲಯಗಳು ಮತ್ತು ಬೀದಿಗಳಲ್ಲಿ ಹೋರಾಟ ನಡೆಸುವ ಮೂಲಕ ಚರ್ಚೆ ನಡೆಯುತ್ತಿದೆ. ಒಟ್ಟಾರೆಯಾಗಿ, ಈ ಕಾನೂನಿನ ಅಡಿಯಲ್ಲಿ ಸಮಾನ ರಕ್ಷಣೆ ತತ್ವವನ್ನು ಅಳವಡಿಸಿಕೊಳ್ಳಬೇಕು ಎನ್ನುವುದನ್ನು ನಾವು ಒತ್ತಾಯಿಸುತ್ತೇವೆ’ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಪ್ರಸ್ತಾಪಿಸಿರುವ ವೆಲ್ಸ್‌, ‘ಯಾವುದೇ ಆರೋಪ ಇಲ್ಲದೆಯೇ ಬಂಧಿಸಿಡಲಾಗಿರುವ ನಾಯಕರನ್ನು ತಕ್ಷಣವೇ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.

‘ಕಾಶ್ಮೀರದಲ್ಲಿ ಇಂಟರ್‌ನೆಟ್‌ ಸೇವೆ ಮತ್ತೆ ಆರಂಭವಾಗಿದೆ. ಆದರೆ, ನಮ್ಮ ರಾಜತಾಂತ್ರಿಕರಿಗೂ ಕಾಶ್ಮೀರ ಭೇಟಿಗೆ ನಿರಂತರ ಅವಕಾಶ ನೀಡಬೇಕು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT