ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೂರೋಪ್ ಒಕ್ಕೂಟ ತಂಡದಿಂದ ಪ್ರಧಾನಿ ಭೇಟಿ-ಜಮ್ಮು ಕಾಶ್ಮೀರ ಕುರಿತು ಚರ್ಚೆ

ಜಮ್ಮು -ಕಾಶ್ಮೀರದಲ್ಲಿ ವಿಶೇಷ ಸ್ಥಾನ ಮಾನ ರದ್ದಾದ ನಂತರ ಬೆಳವಣಿಗೆ ಅಧ್ಯಯನ
Last Updated 28 ಅಕ್ಟೋಬರ್ 2019, 11:15 IST
ಅಕ್ಷರ ಗಾತ್ರ

ನವದೆಹಲಿ:ಜಮ್ಮು-ಕಾಶ್ಮೀರದಲ್ಲಿ ವಾಸ್ತವ ಸ್ಥಿತಿ ಅರಿಯಲು 28 ಮಂದಿ ಸದಸ್ಯರನ್ನು ಒಳಗೊಂಡ ಯೂರೋಪ್ ಒಕ್ಕೂಟದ ತಂಡ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿ ಮಾಡಿತು.

ಭೇಟಿ ಸಮಯದಲ್ಲಿ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ರದ್ದಾದ ನಂತರ ಉದ್ಭವಿಸಿರುವ ಬೆಳವಣಿಗೆಗಳ ಕುರಿತು ಚರ್ಚಿಸಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಇತ್ತೀಚೆಗೆ ಅಮೆರಿಕಾದ ವಾಷಿಂಗ್ಟನ್‌‌ನಲ್ಲಿ ನಡೆದ ಜನಪ್ರತಿನಿಧಿಗಳ ಸಭೆಯಲ್ಲಿತಜ್ಞರ ಒಂದು ಗುಂಪು ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದಾದ ನಂತರ ಉದ್ಭವಿಸಿರುವ ಸಮಸ್ಯೆಗಳ ಕುರಿತು ಕಾಳಜಿ ವ್ಯಕ್ತಪಡಿಸಿತ್ತು. ಈ ಬೆಳವಣಿಗೆ ನಂತರ ಯೂರೋಪಿಯನ್ ರಾಷ್ಟ್ರಗಳ ಈ ತಂಡ ಭೇಟಿ ನೀಡಿರುವುದು ಮಹತ್ವ ಪಡೆದುಕೊಂಡಿದೆ.

ಈ ಸಂಬಂಧ ಅಮೆರಿಕಾದ ರಾಜ್ಯ ಸಹಾಯಕ ಕಾರ್ಯದರ್ಶಿ ಅಲೈಸ್ ವೆಲ್ಸ್ ಮಾತನಾಡಿ, ಜಮ್ಮು-ಕಾಶ್ಮೀರದಲ್ಲಿ ಮಾನವ ಹಕ್ಕುಗಳಿಗೆ ರಕ್ಷಣೆ ಹಾಗೂಗೌರವ ನೀಡಬೇಕು, ಇಂಟರ್ ನೆಟ್ ಮತ್ತು ಮೊಬೈಲ್ ನೆಟ್ ವರ್ಕ್ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕೆಂದು ಭಾರತ ಸರ್ಕಾರವನ್ನು ಒತ್ತಾಯಿಸಿ ಎಂದಿದ್ದರು.

ಅಲ್ಲದೆ,ಜಮ್ಮು ಕಾಶ್ಮೀರದಲ್ಲಿ ವಿಶೇಷ ಸ್ಥಾನ ಮಾನ ರದ್ದಾದ ಸಂದರ್ಭದಿಂದ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಗೃಹ ಬಂಧನದಲ್ಲಿ ಇರಿಸಿರುವುದು, ರಾಜಕೀಯ ಮುಖಂಡರು ಹಾಗೂ ಸ್ಥಳೀಯ ನಿವಾಸಿಗಳನ್ನು ವಶಕ್ಕೆ ತೆಗೆದುಕೊಂಡಿರುವುದರ ಕುರಿತು ಕಾಳಜಿ ವ್ಯಕ್ತಪಡಿಸುವುದು ನಮ್ಮ ಕರ್ತವ್ಯ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT