ಗುರುವಾರ , ಡಿಸೆಂಬರ್ 3, 2020
18 °C

ದಕ್ಷಿಣ ಕೊರಿಯಾ: ಸ್ಫೋಟದಲ್ಲಿ 38 ಮಂದಿ ಸಾವು

ಎಎಪಿ Updated:

ಅಕ್ಷರ ಗಾತ್ರ : | |

ಸೋಲ್‌: ನಿರ್ಮಾಣ ಹಂತದ ಕಟ್ಟಡದಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ 38 ಮಂದಿ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ. ಇಚಿಯಾನ್‌ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ನಿರ್ಮಾಣ ವೇಳೆ ಈ ಅವಘಡ ಸಂಭವಿಸಿದೆ. ಒಟ್ಟು 78 ಕಾರ್ಮಿಕರು ಇದ್ದರು ಎನ್ನಲಾಗಿದೆ. ಅವಶೇಷಗಡಿ ಕಾರ್ಮಿಕರು ಸಿಲುಕಿರುವ ಸಂಭವವಿದೆ ಎನ್ನಲಾಗಿದೆ. 

ಕೆಲವು ಕಾರ್ಮಿಕರು ನೆಲ‌ ಮಹಡಿಯಲ್ಲಿ ಯುರೇಥೇನ್ ರಾಸಾಯನಿಕ ಬಳಸಿ ಕೆಲಸ ಮಾಡುತ್ತಿದ್ದಾಗ ಈ ಸ್ಫೋಟ ಉಂಟಾಗಿದೆ ಎಂದು ಶಂಕಿಸಲಾಗಿದೆ. ಗೋದಾಮಿನಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ ಉಂಟಾಯಿತು ಎಂದು ಮೂಲಗಳು ತಿಳಿಸಿವೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು