ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳದಲ್ಲಿ ಮುಂಗಾರು ಆರ್ಭಟ ಪ್ರವಾಹ, ಭೂಕುಸಿತಕ್ಕೆ 113 ಬಲಿ

Last Updated 28 ಜುಲೈ 2019, 20:02 IST
ಅಕ್ಷರ ಗಾತ್ರ

ಕಠ್ಮಂಡು: ಮುಂಗಾರು ಆರ್ಭಟಕ್ಕೆ ನೇಪಾಳದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಭೂಕುಸಿತ ‌ಉಂಟಾಗಿದ್ದು, ಇದುವರೆಗೂ 113 ಮಂದಿ ಮೃತಪಟ್ಟಿದ್ದಾರೆ.

ಕಳೆದ ಎರಡು ವಾರಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ‌ಅವಘಡಗಳು ಸಂಭವಿಸುತ್ತಿವೆ.ರಾಜಧಾನಿ ಸೇರಿದಂತೆ ಮಧ್ಯ ಮತ್ತು ದಕ್ಷಿಣ ನೇಪಾಳದ ಹಲವು ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದು, 38 ಮಂದಿ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೇನೆ ಮತ್ತು ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಸಾಂಕ್ರಮಿಕ ರೋಗಗಳಭೀತಿ ಎದುರಾಗಿದೆ. ಈಗಾಗಲೇ 10 ಸಾವಿರಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯಕೀಯ ನೆರವಿಗೆ ನೇಪಾಳ ಅಂತರರಾಷ್ಟ್ರೀಯ ಸಮುದಾಯವನ್ನು ಕೋರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT