ಮೀ– ಟೂ: ಅಹ್ನ್ ಹೀ-ಜಂಗ್‌ಗೆ ಶಿಕ್ಷೆ
ಸೋಲ್: ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಅಹ್ನ್ ಹೀ-ಜಂಗ್ ಅವರಿಗೆ ಮೀ– ಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರೂವರೆ ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
2017ರಿಂದ ವಿವಿಧ ಸಂದರ್ಭಗಳಲ್ಲಿ ಸಹಾಯಕಿ ಮೇಲೆ ಅತ್ಯಾಚಾರ ಮಾಡಿರುವ ಆರೋಪ ಇವರ ಮೇಲಿತ್ತು. ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಒಟ್ಟು ಒಂಬತ್ತು ಪ್ರಕರಣಗಳು ಇವರ ವಿರುದ್ಧ ದಾಖಲಾಗಿತ್ತು.
ಈ ಹಿಂದೆ ಕೆಳ ನ್ಯಾಯಾಲಯ ಇವರನ್ನು ಪ್ರಕರಣದಿಂದ ಖುಲಾಸೆಗೊಳಿಸಿತ್ತು. ಇದು ವಿವಾದಕ್ಕೆ ಕಾರಣವಾಗಿತ್ತು.
ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್-ಜೇ-ಇನ್ ನಂತರದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಇವರು ಗುರುತಿಸಿ
ಕೊಂಡಿದ್ದರು.
ಬರಹ ಇಷ್ಟವಾಯಿತೆ?
0
0
0
0
0
0 comments
View All