ಸೋಮವಾರ, ಸೆಪ್ಟೆಂಬರ್ 21, 2020
27 °C

ಎಚ್‌–1ಬಿ ವೀಸಾ ವಂಚನೆ: ನಾಲ್ವರು ಭಾರತೀಯರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಎಚ್‌–1ಬಿ ವೀಸಾ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ನಾಲ್ವರು ಭಾರತೀಯರನ್ನು ಅಮೆರಿಕ ಪೊಲೀಸರು  ಬಂಧಿಸಿದ್ದಾರೆ. 

ವಿಜಯ್‌ ಮಾನೆ, ವೆಂಕಟರಮಣ ಮನಂ, ಫರ್ನಾಂಡೊ ಸಿಲ್ವಾ ಹಾಗೂ ಸತೀಶ್‌ ವೆಮೂರಿ ಅವರನ್ನು ಬಂಧಿಸಲಾಗಿದೆ. ಇವರಲ್ಲಿ ಇಬ್ಬರು ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅಮೆರಿಕ ಪೊಲೀಸರು ಮಾಹಿತಿ ನೀಡಿದ್ದಾರೆ. 

ಅಮೆರಿಕ ಕಂಪನಿಗಳಲ್ಲಿ ಕೆಲಸ ಮಾಡುವ ವಿದೇಶಿಯರಿಗೆ ಎಚ್‌–1ಬಿ ವೀಸಾವನ್ನು ನೀಡಲಾಗುತ್ತದೆ. ಇದನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಬಂಧಿಸಲಾಗಿದ್ದು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು