ಗುರುವಾರ , ಫೆಬ್ರವರಿ 20, 2020
19 °C

ತಾಪಮಾನ: ಒಪ್ಪಂದಕ್ಕೆ ಬರಲು ವಿಫಲ

ಎಪಿ Updated:

ಅಕ್ಷರ ಗಾತ್ರ : | |

Prajavani

ಮ್ಯಾಡ್ರಿಡ್‌: ಜಾಗತಿಕ ತಾಪಮಾನಕ್ಕೆ ಕಾರಣವಾಗುವ ಇಂಗಾಲದ ಕುರಿತಂತೆ ಇಲ್ಲಿ ನಡೆದ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಶೃಂಗಸಭೆ ’ಸಿಒಪಿ 25’ ಸ್ಪಷ್ಟವಾದ ಒಪ್ಪಂದಕ್ಕೆ ಬರಲು ವಿಫಲವಾಯಿತು.

ಎರಡು ವಾರಗಳ ಕಾಲ ನಡೆದ ಈ ಶೃಂಗಸಭೆ ಭಾನುವಾರ ಮುಕ್ತಾಯವಾಯಿತು. ಸುಮಾರು 200 ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದ ಈ ಸಭೆಯಲ್ಲಿ ತಾಪಮಾನ ಹೆಚ್ಚಿಸುವ ಹಸಿರುಮನೆ ಅನಿಲಗಳನ್ನು ನಿಯಂತ್ರಿಸಲು ಮತ್ತು ಹವಾಮಾನ ಬದಲಾವಣೆಯಿಂದ ಸಂಕಷ್ಟಕ್ಕೀಡಾಗುವ ಬಡ ರಾಷ್ಟ್ರಗಳಿಗೆ ನೆರವಾಗುವುದಾಗಿ ಮಾತ್ರ ಘೋಷಿಸಲಾಯಿತು.

ಆದರೆ, ಇಂಗಾಲದ ಹೊರಸೂಸುವಿಕೆ ನಿಯಂತ್ರಣ ಕ್ರಮಗಳ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳಲಿಲ್ಲ. ಈ ಬಗ್ಗೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿ ದ್ದರಿಂದ ಮುಂದಿನ ಶೃಂಗಸಭೆಯಲ್ಲಿ ನಿರ್ಣಯ ಕೈಗೊಳ್ಳಲು ನಿರ್ಧರಿಸ
ಲಾಯಿತು. ಹವಾಮಾನ ಬದಲಾವಣೆ ನಿಯಂತ್ರಿಸಲು ವಿಶ್ವದ ಶ್ರೀಮಂತ ರಾಷ್ಟ್ರಗಳು ಬದ್ಧತೆ ತೋರುತ್ತಿಲ್ಲ ಎಂದು ಪರಿಸರ ಸಂಘಟನೆಗಳು ಮತ್ತು ಕಾರ್ಯಕರ್ತರು ದೂರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು