ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ; ಮತದಾರರಿದ್ದ ಬಸ್‌ಗಳ ಮೇಲೆ ಗುಂಡಿನ ದಾಳಿ

Last Updated 16 ನವೆಂಬರ್ 2019, 3:14 IST
ಅಕ್ಷರ ಗಾತ್ರ

ಕೊಲೊಂಬೊ: ಶ್ರೀಲಂಕಾದಲ್ಲಿ ಮತದಾರರನ್ನು ಕರೆದೊಯ್ಯುತ್ತಿದ್ದ ಬಸ್‌ಗಳ ಮೇಲೆ ಬಂದೂಕುದಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ನೂತನ ಅಧ್ಯಕ್ಷರ ಆಯ್ಕೆಗೆ ಶನಿವಾರ ಚುನಾವಣೆ ನಡೆಯುತ್ತಿದೆ.

ಈಗಾಗಲೇ ಅಧ್ಯಕ್ಷೀಯ ಚುನಾವಣೆ ಮತದಾನ ಆರಂಭಗೊಂಡಿದ್ದು, ಶ್ರೀಲಂಕಾದ ವಾಯವ್ಯ ಭಾಗದಲ್ಲಿ ಅಲ್ಪ ಸಂಖ್ಯಾತ ಮುಸ್ಲಿಮ್‌ ಮತದಾರರು ಸಾಗುತ್ತಿದ್ದ ಬಸ್‌ಗಳ ಮೇಲೆ ಗುಂಡಿನ ದಾಳಿ ನಡೆದಿದೆ.

ದಾಳಿಕೋರರು ಟೈರ್‌ಗಳಿಗೆ ಬೆಂಕಿ ಹಚ್ಚುವ ಮೂಲಕ ರಸ್ತೆಯಲ್ಲಿ ಬಸ್‌ಗಳ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದ್ದಾರೆ. ಸಾಲಾಗಿ ಸಂಚರಿಸುತ್ತಿದ್ದ ಸುಮಾರು 100 ಬಸ್‌ಗಳ ಮೇಲೆ ಅಡಗಿ ಕುಳಿತು ಗುಂಡಿನ ದಾಳಿ ನಡೆಸಿದ್ದಾರೆ.ದಾಳಿಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಪೊಲೀಸರು ಮಾಹಿತಿ ನೀಡಿರುವುದಾಗಿ ಎಎಫ್‌ಪಿ ವರದಿ ಮಾಡಿದೆ.

ಗುಂಡು ಹಾರಿಸುವ ಜತೆಗೆ ಕಲ್ಲುಗಳನ್ನೂ ತೂರಿದ್ದಾರೆ. ಕನಿಷ್ಠ ಎರಡು ಬಸ್‌ಗಳಿಗೆ ಹಾನಿಯಾಗಿರುವುದಾಗಿ ತಿಳಿದು ಬಂದಿದೆ.

(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT