ಬ್ರೆಜಿಲ್‌ನಲ್ಲಿ ಶೂಟೌಟ್‌: 11 ಮಂದಿ ದುರ್ಮರಣ

ಬುಧವಾರ, ಜೂನ್ 19, 2019
23 °C

ಬ್ರೆಜಿಲ್‌ನಲ್ಲಿ ಶೂಟೌಟ್‌: 11 ಮಂದಿ ದುರ್ಮರಣ

Published:
Updated:

ರಿಯೋ ಡಿ ಜನೈರೋ: ಉತ್ತರ ಬ್ರೆಜಿಲ್‌ನ ಬಾರ್‌ವೊಂದರ ಮೇಲೆ ಭಾನುವಾರ ರಾತ್ರಿ ದುಷ್ಕರ್ಮಿಗಳ ಗುಂಪೊಂದು ಬಂದೂಕಿನಿಂದ ದಾಳಿ ನಡೆಸಿದ್ದು, ಕನಿಷ್ಠ 11 ಮಂದಿ ಮೃತಪಟ್ಟಿದ್ದಾರೆ. 

ಬೆಲೆಮ್‌ ನಗರದಲ್ಲಿ ಭಾನುವಾರ ರಾತ್ರಿ ಈ ದುರ್ಘಟನೆ ನಡೆದಿದೆ ಎಂದು ಸಾರ್ವಜನಿಕ ಸುರಕ್ಷತಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಆರು ಮಹಿಳೆಯರು ಮತ್ತು ಐವರು ಪುರುಷರು ಅಸುನೀಗಿರುವುದಾಗಿ ಅಲ್ಲಿನ ಸ್ಥಳೀಯ ವೆಬ್‌ಸೈಟ್‌ ‘ಜಿ1’ ವರದಿ ಮಾಡಿದೆ. 

ಬೈಕ್‌ನಲ್ಲಿ ಬಂದ ಏಳು ಮಂದಿ ದುಷ್ಕರ್ಮಿಗಳು ಬಾರ್‌ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದರು. ನಂತರ ಎಲ್ಲರೂ ಸ್ಥಳದಿಂದ ಪಲಾಯನಗೊಂಡರು. ಗುಂಪಿನಲ್ಲಿದ್ದವರ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಗೆ ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ಈ ವರೆಗೆ ಏನನ್ನೂ ತಿಳಿಸಿಲ್ಲ. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 3

    Happy
  • 2

    Amused
  • 3

    Sad
  • 0

    Frustrated
  • 1

    Angry

Comments:

0 comments

Write the first review for this !