ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಂಗ್‌ಕಾಂಗ್‌: ಪ್ರತಿಭಟನೆ ಪೊಲೀಸ್‌ ಬಿಗಿಭದ್ರತೆ

ಹೋರಾಟಗಾರರಿಂದ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆಗೆ ಕರೆ
Last Updated 7 ಸೆಪ್ಟೆಂಬರ್ 2019, 20:15 IST
ಅಕ್ಷರ ಗಾತ್ರ

ಹಾಂಗ್‌ಕಾಂಗ್‌(ಎಎಫ್‌ಪಿ): ಪ್ರಜಾ ಪ್ರಭುತ್ವ ಪರ ಹೋರಾಟಗಾರರು ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆಗೆ ಕರೆ ನೀಡಿರುವ ಕಾರಣ ಹಾಂಗ್‌ಕಾಂಗ್‌ ನಾದ್ಯಂತ ಶನಿವಾರ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು.

ಆನ್‌ಲೈನ್‌ ವೇದಿಕೆ ಮೂಲಕ ಪ್ರತಿಭಟನೆಗೆ ಕರೆ ನೀಡಲಾಗಿದ್ದು, ಬಸ್‌, ರೈಲು ನಿಲ್ದಾಣಗಳಲ್ಲೂ ಹೆಚ್ಚಿನ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು.

ವಿಮಾನ ನಿಲ್ದಾಣಕ್ಕೆ ತೆರಳುವಪ್ರತಿಯೊಬ್ಬರನ್ನೂ ಪೊಲೀಸರು ತಪಾ ಸಣೆ ನಡೆಸಿಯೇ ಒಳಗೆ ಬಿಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಂಕಿತ ಅಪರಾಧಿಗಳನ್ನು ವಿಚಾರಣೆ ಗಾಗಿ ಚೀನಾ ಮೇನ್‌ ಲ್ಯಾಂಡ್‌ಗೆ ಹಸ್ತಾಂತರಿಸುವ ವಿವಾದಾತ್ಮಕ ಮಸೂದೆಯನ್ನು ವಿರೋಧಿಸಿ ಹಾಂಗ್‌ ಕಾಂಗ್‌ನಲ್ಲಿ ಮೂರು ತಿಂಗಳುಗಳಿಂದ ಭಾರಿ ಪ್ರತಿಭಟನೆ ನಡೆಯುತ್ತಿದೆ.

ಪ್ರಸ್ತಾವಿತ ಮಸೂದೆಯನ್ನು ಸಂಪೂರ್ಣವಾಗಿ ಕೈಬಿಡುವುದಾಗಿ ಚೀನಾ ಪರ ಒಲವು ಇರುವ ನಾಯಕಿ ಹಾಗೂ ಹಾಂಗ್‌ಕಾಂಗ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕ್ಯಾರಿ ಲ್ಯಾಮ್‌ ಅವರು ಬುಧವಾರ ಘೋಷಿಸಿದ್ದರು.ಇದು ಪ್ರತಿಭಟನಕಾರರ ಪ್ರಮುಖ ಬೇಡಿಕೆಗಳಲ್ಲೊಂದಾಗಿತ್ತು.

ಉದ್ವಿಗ್ನ ಸ್ಥಿತಿಯನ್ನು ಶಮನ ಗೊಳಿಸುವ ಸಲುವಾಗಿ ಕ್ಯಾರಿ ಅವರು ಮಾತುಕತೆಗೂ ಮುಂದಾಗಿದ್ದಾರೆ. ಆದರೆ ಪ್ರತಿಭಟನಕಾರರು ಇದನ್ನು ತಳ್ಳಿ ಹಾಕಿದ್ದಾರೆ.

ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಇದುವರೆಗೆ 1,100ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಹಲವರು ದೀರ್ಘಕಾಲದ ಜೈಲು ಶಿಕ್ಷೆಗೂ ಗುರಿಯಾಗಿದ್ದಾರೆ. ಪ್ರಜಾಪ್ರಭುತ್ವ ಪರ ಹೋರಾಟ ಗಾರರು ಈ ಹಿಂದೆ ವಿಮಾನ ನಿಲ್ದಾಣದಲ್ಲಿ ಹಲವು ಬಾರಿ ಬೃಹತ್‌ ಪ್ರತಿಭಟನೆ ನಡೆಸಿದ್ದರು. ಕಳೆದ ತಿಂಗಳು ಪ್ರತಿಭಟನೆಯ ಕಾರಣ ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT