ಭಾನುವಾರ, ಜನವರಿ 19, 2020
24 °C

ಪಾಕಿಸ್ತಾನದಲ್ಲಿ ಭಾರಿ ಮ‌ಳೆ, ಹಿಮಪಾತ: 80 ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್ : ‘ಪಾಕಿಸ್ತಾನದಲ್ಲಿ ಸತತವಾಗಿ ಸುರಿದ ಭಾರಿ ಮಳೆ ಹಾಗೂ ಹಿಮಪಾತದಿಂದಾಗಿ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಕನಿಷ್ಠ 80 ಮಂದಿ ಮೃತಪಟ್ಟಿದ್ದು, 42ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ’ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

‘ಕಳೆದ ಮೂರು ದಿನಗಳಿಂದಲೂ ಪಾಕಿಸ್ತಾನ ಹವಾಮಾನ ವೈಪರೀತ್ಯದಿಂದ ತತ್ತರಿಸಿದ್ದು, ಎಲ್ಲೆಡೆ ರಸ್ತೆ ಸಂಪರ್ಕ ಹಾಗೂ ಸಂವಹನ ವ್ಯವಸ್ಥೆ ಹದಗೆಟ್ಟಿದೆ. ಇದರಿಂದಾಗಿ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ತನ್ನ ವರದಿಯಲ್ಲಿ ಹೇಳಿದೆ.

‘ಮಳೆಯಿಂದಾಗಿ 45 ಮನೆಗಳು ಸಂಪೂರ್ಣ ನಾಶವಾಗಿವೆ. ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿರುವುದರಿಂದಾಗಿ, ಮತ್ತಷ್ಟು ಜನರು ಜೀವ ಕಳೆದುಕೊಂಡಿರುವ ಸಂಭವ ಇದೆ’ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ತಗ್ಗು ಪ್ರದೇಶಗಳಾದ ಸಿಯಾಲ್‌ಕೋಟ್‌, ಗುಜರಾತ್‌ ಹಾಗೂ ಪಂಜಾಬ್ ಪ್ರಾಂತ್ಯದ ಹಲವು ನಗರಗಳಲ್ಲಿ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು