ಭಾನುವಾರ, ಡಿಸೆಂಬರ್ 6, 2020
19 °C

ಅಕ್ರಮ ಹಣ ವರ್ಗಾವಣೆ, ವಂಚನೆ ಪ್ರಕರಣ | ಹಸ್ತಾಂತರ ಆದೇಶದ ವಿರುದ್ಧ ಮಲ್ಯ ಅರ್ಜಿ

ಪಿಟಿಐ Updated:

ಅಕ್ಷರ ಗಾತ್ರ : | |

ಲಂಡನ್‌: ಅಕ್ರಮ ಹಣ ವರ್ಗಾವಣೆ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಹಸ್ತಾಂತರಿಸುವಂತೆ ಲಂಡನ್‌ ಹೈಕೋರ್ಟ್‌ ನೀಡಿದ್ದ ಆದೇಶದ ವಿರುದ್ದ ಉದ್ಯಮಿ ವಿಜಯ ಮಲ್ಯ ಬ್ರಿಟನ್‌ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಏಪ್ರಿಲ್‌ 20ರಂದು ಹೈಕೋರ್ಟ್‌ ಆದೇಶ ನೀಡಿತ್ತು. ಈ ಆದೇಶದ ವಿರುದ್ಧ ಅರ್ಜಿ ಸಲ್ಲಿಸಲು ಮಲ್ಯ ಅವರಿಗೆ 14 ದಿನಗಳ ಕಾಲಾವಕಾಶ ನೀಡಲಾಗಿತ್ತು.

‘ಮಲ್ಯ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸಲು ಮೇ 14ರವರೆಗೆ ನಮಗೆ ಕಾಲಾವಕಾಶವಿದೆ’ ಎಂದು ಭಾರತದ ತನಿಖಾ ಇಲಾಖೆಗಳನ್ನು ಪ್ರತಿನಿಧಿಸುವ ಬ್ರಿಟನ್‌ನಲ್ಲಿರುವ ವಕೀಲರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು