ಮಂಗಳವಾರ, ಡಿಸೆಂಬರ್ 10, 2019
20 °C

ಇಮ್ರಾನ್- ಟ್ರಂಪ್‌ ಮಾತುಕತೆ: ಕಾಶ್ಮೀರ ವಿಷಯ ಪ್ರಸ್ತಾಪ

ಪಿಟಿಐ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್‌: ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಅಫ್ಗಾನಿಸ್ತಾನ ಶಾಂತಿ ಪ್ರಕ್ರಿಯೆ ಮತ್ತು ಕಾಶ್ಮೀರದ ವಿಷಯಗಳ ಕುರಿತು ಇವರು ಚರ್ಚಿಸಿದ್ದಾರೆ ಎಂದು ಪ್ರಧಾನಿ ಕಚೇರಿಯ ಪ್ರಕಟಣೆ ತಿಳಿಸಿದೆ. 

ಕಾಶ್ಮೀರ ಸಮಸ್ಯೆಯ ಶಾಂತಿಯುತ ಪರಿಹಾರಕ್ಕಾಗಿ ಅಮೆರಿಕ ಅಧ್ಯಕ್ಷರು ತಮ್ಮ ಪ್ರಯತ್ನ ಮುಂದುವರಿಸಬೇಕು ಎಂದು ಪ್ರಧಾನಿ ಖಾನ್‌ ಒತ್ತಿ ಹೇಳಿದ್ದಾರೆ.

‘ಅಫ್ಗಾನಿಸ್ತಾನದಲ್ಲಿರುವ ಇಬ್ಬರು ವಿದೇಶಿ ಒತ್ತೆಯಾಳುಗಳನ್ನು ಬಿಡುಗಡೆ ಗೊಳಿಸಿರುವುದು ಸಕಾರಾತ್ಮಕ ಬೆಳವಣಿಗೆ. ಇದರಿಂದ ಪಾಕಿಸ್ತಾನಕ್ಕೆ ಸಂತಸವಾಗಿದೆ’ ಎಂದು ಖಾನ್‌ ತಿಳಿಸಿದ್ದಾರೆ. 

ಈ ಸಕಾರಾತ್ಮಕ ಫಲಿತಾಂಶವನ್ನು ಸುಗಮಗೊಳಿಸಲು ನೆರವಾದ ಪಾಕಿಸ್ತಾನದ ಪ್ರಯತ್ನಗಳಿಗೆ ಟ್ರಂಪ್‌ ಧನ್ಯವಾದ ಅರ್ಪಿಸಿದ್ದಾರೆ. 

ಅಫ್ಗಾನಿಸ್ತಾನದಲ್ಲಿ ಶಾಂತಿ ಮತ್ತು ಸಾಮರಸ್ಯದ ಪ್ರಕ್ರಿಯೆಯ ಪ್ರಗತಿಗೆ ಪಾಕಿಸ್ತಾನದ ಬದ್ಧತೆಯನ್ನು ಖಾನ್‌ ಪುನರುಚ್ಚರಿಸಿದ್ದಾರೆ. ಈ ಉದ್ದೇಶದ ಸಾಕಾರಕ್ಕೆ ಬದ್ಧವಾಗಿರುವುದಾಗಿ ಉಭಯ ನಾಯಕರು ಸಮ್ಮತಿ ಸೂಚಿಸಿದರು. 

ಮೂರು ವರ್ಷಗಳಿಂದ ಒತ್ತೆಯಾಳಾಗಿ ಇರಿಸಿಕೊಂಡಿದ್ದ ಇಬ್ಬರು ವಿದೇಶಿಗರನ್ನು ತಾಲಿಬಾನ್‌ ಮಂಗಳವಾರ ಬಿಡುಗಡೆ ಮಾಡಿತ್ತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು