ಮಂಗಳವಾರ, ಆಗಸ್ಟ್ 3, 2021
26 °C

ಭಾರತ, ರಷ್ಯಾ, ಚೀನಾ ಮಾತುಕತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತದ ವಿದೇಶಾಂಗ ವ್ಯಹಾರಗಳ ಸಚಿವ ಎಸ್‌. ಜೈಶಂಕರ್‌ ಅವರು ಜೂನ್‌ 22ರಂದು ಚೀನಾ ಹಾಗೂ ರಷ್ಯಾದ ವಿದೇಶಾಂಗ ವ್ಯವಹಾರಗಳ ಸಚಿವರೊಂದಿಗೆ ಆನ್‌ಲೈನ್‌ ಮಾತುಕತೆ‌ ನಡೆಸಲಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ದ್ವಿಪಕ್ಷೀಯ ಸಮಸ್ಯೆಗಳನ್ನು ಸಾಮಾನ್ಯವಾಗಿ ತೃತೀಯ ರಾಷ್ಟ್ರದ ಸಮ್ಮುಖದಲ್ಲಿ ಚರ್ಚಿಸುವುದಿಲ್ಲ. ಆದ್ದರಿಂದ ಈ ಸಭೆಯಲ್ಲಿ ಭಾರತ–ಚೀನಾ ಗಡಿ ಸಮಸ್ಯೆ ಚರ್ಚೆಯಾಗುವ ಸಾಧ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ.

‘ಭಾರತ–ನೇಪಾಳ ಬಂಧ ಮುರಿಯಲಾಗದು’

‘ಭಾರತ– ನೇಪಾಳ ಸಂಬಂಧಗಳು ಸಾಮಾಜಿಕ, ಭೌಗೋಳಿಕ, ಚಾರಿತ್ರಿಕ ಮತ್ತು ಸಾಂಸ್ಕೃತಿಕ ವಿಚಾರಗಳಿಗಷ್ಟೇ ಸೀಮಿತವಾಗಿ ಉಳಿದಿಲ್ಲ. ನಾವು ಆಧ್ಯಾತ್ಮಿಕ ಬಾಂಧವ್ಯವನ್ನೂ ಹೊಂದಿದ್ದೇವೆ ಎಂಬುದನ್ನು ಮರೆಯಲು ಸಾಧ್ಯವಿಲ್ಲ. ಯಾರು ಎಷ್ಟೇ ಬೇಲಿಗಳನ್ನು ಹಾಕಿದರೂ ನಮ್ಮ ಬಾಂಧವ್ಯವನ್ನು ಮುರಿಯಲಾಗದು’ ಎಂದು ಚೀನಾದ ಹೆಸರು ಉಲ್ಲೇಖಿಸದೆ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು