ಶನಿವಾರ, ಡಿಸೆಂಬರ್ 7, 2019
24 °C

ಅಮೆರಿಕ ಅಧ್ಯಕ್ಷೀಯ ಚುನಾವಣೆ ಕಣದಿಂದ ಹಿಂದೆ ಸರಿದ ಕಮಲಾ ಹ್ಯಾರಿಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಭಾರತೀಯ ಸಂಜಾತೆ ಹಾಗೂ ಸೆನೆಟರ್‌ ಕಮಲಾ ಹ್ಯಾರಿಸ್‌ 2020ರಲ್ಲಿ ನಡೆಯಲಿರುವ ಅಮೆರಿಕದ ಅಧ್ಯಕ್ಷೀಯ ಚುನಾವಣೆ ಕಣದಿಂದ ಹಿಂದೆ ಸರಿದಿದ್ದಾರೆ. 

ದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವ ಅಮೆರಿಕದಲ್ಲಿ ಚುನಾವಣೆ ಪ್ರಚಾರಕ್ಕೆ ಸಾಕಷ್ಟು ಹಣದ ಅವಶ್ಯಕತೆ ಇದೆ, ಚುನಾವಣಾ ಪ್ರಚಾರ ಅಭಿಯಾನಕ್ಕೆ ಹಣಕಾಸಿನ ಕೊರತೆ ಇದೆ, ಈ ಅಭಿಯಾನಕ್ಕೆ ಹಣ ಹೊಂದಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ ಆದ್ದರಿಂದ ಚುನಾವಣೆ ಕಣದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಕಮಲಾ ಹ್ಯಾರಿಸ್‌ ಹೇಳಿದ್ದಾರೆ. 

ನನ್ನ ಬೆಂಬಲಿಗರಿಗೆ ಕೃತಜ್ಞತೆಗಳು. ನಾನು ಇಂದಿನಿಂದ ಅಭಿಯಾನವನ್ನು ಸ್ಥಗಿತಗೊಳಿಸುತ್ತಿದ್ದೇನೆ. ಜನರ ನ್ಯಾಯಕ್ಕಾಗಿ ಹೋರಾಟ ಮುಂದುವರಿಸುತ್ತೇನೆ’ ಎಂದು ಹ್ಯಾರಿಸ್‌ ಟ್ವೀಟ್‌ ಮಾಡಿದ್ದಾರೆ. 

ಇತ್ತೀಚೆಗೆ ಪ್ರಕಟವಾಗಿದ್ದ ಚುನಾವಣಾ ಸಮೀಕ್ಷೆಯಲ್ಲಿ ಹ್ಯಾರಿಸ್‌ ತೀವ್ರ ಹಿನ್ನಡೆ ಅನುಭವಿಸಿದ್ದರು. ಕಳೆದ ಜನವರಿಯಲ್ಲಿ ಹ್ಯಾರಿಸ್‌ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 20 ಸಾವಿರಕ್ಕೂ ಅಧಿಕ ಬೆಂಬಲಿಗರು ಭಾಗವಹಿಸಿದ್ದರು.   

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು