ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲೆ: ಭಾರತೀಯ ಮೂಲದ ವ್ಯಕ್ತಿ ಬಂಧನ

Last Updated 1 ಸೆಪ್ಟೆಂಬರ್ 2019, 5:04 IST
ಅಕ್ಷರ ಗಾತ್ರ

ಲಂಡನ್‌:ನೈರುತ್ಯ ಲಂಡನ್‌ನಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಆರೋಪದ ಮೇಲೆ ಭಾರತೀಯ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಗುರ್ಜೀತ್ ಸಿಂಗ್ ಲಾಲ್ (35) ಬಂಧಿತ ಆರೋಪಿ. ಸಂಗೀತಗಾರ ಮತ್ತುರಗ್ಬಿ ಆಟಗಾರ ಅಲನ್ ಇಸಿಚೆ ಹತ್ಯೆಯಾದವರು.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನಂತರ ಪೊಲೀಸರ ವಶಕ್ಕೆ ನೀಡಲಾಗಿದೆ. ಮುಂದಿನ ವಿಚಾರಣೆ ಮಂಗಳವಾರ ನಡೆಯಲಿದೆ.

ಆಗಸ್ಟ್‌ 24ರಂದು ಕೊಲೆ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯಿದ್ದರೂ, ಸಾಕ್ಷಿ ನುಡಿಯಬೇಕೆಂದುಪೊಲೀಸರುಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT