ಬುಧವಾರ, ಮೇ 27, 2020
27 °C

ತವರಿಗೆ ಮರಳಲು ವಿಮಾನ ವ್ಯವಸ್ಥೆ ಮಾಡಿ: ಪ್ರಧಾನಿಗೆ ಭಾರತೀಯ ವಿದ್ಯಾರ್ಥಿಗಳ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಡನ್‌: ತವರಿಗೆ ಮರಳಲು ತಮಗೆ ವಿಮಾನ ವ್ಯವಸ್ಥೆ ಮಾಡುವಂತೆ ಯುಕೆಯಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಕೋವಿಡ್‌-19 ಹರಡುವಿಕೆ ನಿಯಂತ್ರಿಸಲು ಭಾರತ ಸರ್ಕಾರ ಹೊರದೇಶಗಳ ವಿಮಾನ ಪ್ರಯಾಣಕ್ಕೆ ತಡೆಯೊಡ್ಡಿದೆ. ಈ ಹಿನ್ನೆಲೆಯಲ್ಲಿ ಯುಕೆಯಲ್ಲಿರುವ ಭಾರತೀಯ ಮೂಲದ ವಿದ್ಯಾರ್ಥಿಗಳಿಗೆ ತವರಿಗೆ ಮರಳಲು ಸಾಧ್ಯವಾಗುತ್ತಿಲ್ಲ.

ಭಾರತದ ಕನಿಷ್ಠ 380 ವಿದ್ಯಾರ್ಥಿಗಳ ಗುಂಪೊಂದು ತಮ್ಮ ಪಾಸ್‌ಪೋರ್ಟ್ ವಿವರಗಳ ಮಾಹಿತಿ ಸಂಗ್ರಹಿಸಿದೆ. ಆ ಮೂಲಕ ಭಾರತ ಸರ್ಕಾರದ ಮೇಲೆ ಸಾಮೂಹಿಕ ಒತ್ತಡ ಹೇರುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿದೆ. 

ಯುಕೆ ಪಕ್ಕದ ಇಟಲಿ ಮತ್ತು ಪ್ರಾನ್ಸ್‌ ದೇಶಗಳಲ್ಲಿ ಕೊರೊನಾ ವೈರಸ್‌ ಸೋಂಕು ವ್ಯಾಪಕವಾಗಿದ್ದು, ಈಗಾಗಲೇ ಸಾವಿರಾರು ಜನರನ್ನು ಬಲಿಪಡೆದುಕೊಂಡಿದೆ. ಯುಕೆಯಲ್ಲಿಯೂ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳನ್ನು ಆತಂಕಕ್ಕೆ ದೂಡಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು