ಸೋಮವಾರ, ಸೆಪ್ಟೆಂಬರ್ 27, 2021
22 °C

ಈಜಿಪ್ಟ್‌ನಲ್ಲಿ ಬಸ್‌ ಅಪಘಾತ: ಮೂವರು ಭಾರತೀಯರ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಕೈರೊ: ಪ್ರವಾಸಿಗರನ್ನು ಕರೆದೊಯ್ಯತ್ತಿದ್ದ ಎರಡು ಬಸ್‌ಗಳು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಭಾರತೀಯರು ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ.

ಈ ಬಸ್‌ಗಳು ಶನಿವಾರ ಹುರ್ಗಡಾ ಪಟ್ಟಣಕ್ಕೆ ತೆರಳುತ್ತಿದ್ದವು. ಕೈರೊದಿಂದ 120 ಕಿ.ಮೀ. ದೂರದ ಐನ್‌ ಸೋಖ್ಹನ ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಮೃತರು ಮತ್ತು ಗಾಯಗೊಂಡವರ ಕುಟುಂಬವನ್ನು ಸಂಪರ್ಕಿಸಿದ್ದು, ಅಗತ್ಯ ನೆರವು ನೀಡಲಾಗುತ್ತಿದೆ ಎಂದು ರಾಯಭಾರ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಸ್‌ಗಳಲ್ಲಿ 16 ಭಾರತೀಯರಿದ್ದರು. ಮೃತರಲ್ಲಿ ಇಬ್ಬರು ಮಲೇಷ್ಯಾ ಪ್ರಜೆಗಳು ಮತ್ತು ಮೂವರು ಈಜಿಪ್ಟ್‌ ನವರಿದ್ದಾರೆ.

ಹದಗೆಟ್ಟ ರಸ್ತೆ ಮತ್ತು ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸದೇ ಇರುವುದರಿಂದ ಈಜಿಪ್ಟ್‌ನಲ್ಲಿ ರಸ್ತೆ ಅಪಘಾತಗಳು ನಡೆಯುತ್ತಿವೆ.

2018 ರಲ್ಲಿ 8 ಸಾವಿರಕ್ಕೂ ಹೆಚ್ಚು ರಸ್ತೆ ಅಪಘಾತಗಳು ವರದಿಯಾಗಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು