ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಿಕರ ಏಕಿಲ್ಲ?

Last Updated 4 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಆ ಮೂಲಕ ತಾನು ಉಳ್ಳವರ ಪರ ಮತ್ತು ಬಡ ಕಾರ್ಮಿಕರ, ಗುತ್ತಿಗೆ ಮತ್ತು ತಾತ್ಕಾಲಿಕ ನೌಕರರ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ.

ಇಂಧನ, ಅರಣ್ಯ, ಸಮಾಜ ಕಲ್ಯಾಣ, ಪಂಚಾಯತ್ ರಾಜ್, ಶಿಕ್ಷಣ... ಹೀಗೆ ವಿವಿಧ ಇಲಾಖೆಗಳಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಸಮಯದಿಂದ ಗುತ್ತಿಗೆ ಆಧಾರದಲ್ಲಿ ನೌಕರರು ಕೆಲಸ ಮಾಡುತ್ತಿದ್ದಾರೆ. ಇವರಿಗೆ ಉದ್ಯೋಗ ಭದ್ರತೆ ಇಲ್ಲ. ಕಡಿಮೆ ಸಂಬಳಕ್ಕೆ ದುಡಿಸಿಕೊಳ್ಳಲಾಗುತ್ತಿದೆ. ತಮ್ಮ ಬೇಡಿಕೆ ಈಡೇರಿಕೆಗಾಗಿ ಈ ನೌಕರರು ಪ್ರತಿಭಟನೆ ಮಾಡಿದ್ದರೂ ಅದಕ್ಕೆ ಯಾವ ಸಚಿವರೂ ಸೊಪ್ಪು ಹಾಕಲಿಲ್ಲ.

ಚುನಾವಣೆಯ ಸಂದರ್ಭದಲ್ಲಿ ಕೆಲವರ ಬಗ್ಗೆ ಮಮತೆ ತೋರಿಸಲಾಗುತ್ತಿದೆ. ಆದರೆ ತಾತ್ಕಾಲಿಕ ಮತ್ತು ಗುತ್ತಿಗೆ ನೌಕರರ ಸಮಸ್ಯೆಗಳ ಬಗ್ಗೆ ಯಾವ ಪಕ್ಷವೂ ಮಾತನಾಡುತ್ತಿಲ್ಲ. ಯಾವ ಶಾಸಕರೂ ವಿಧಾನಸಭೆಯಲ್ಲಿ ಈ ಸಮಸ್ಯೆಯ ಬಗ್ಗೆ ಮಾತನಾಡಿಲ್ಲ.

ಗುತ್ತಿಗೆ ನೌಕರರ ಸಮಸ್ಯೆಯನ್ನು ಮಾನವೀಯತೆಯ ದೃಷ್ಟಿಯಿಂದಾದರೂ ಮುಖ್ಯಮಂತ್ರಿ  ಆಲಿಸಬೇಕು. ಕಾರ್ಮಿಕ ಕಾಯ್ದೆಯ ಅನ್ವಯ ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಇತರೆ ಸವಲತ್ತುಗಳನ್ನು ನೀಡಿ, ಯಾರನ್ನೂ ಕೆಲಸದಿಂದ ತೆಗೆದು ಹಾಕುವುದಿಲ್ಲ ಎಂಬ ಭರವಸೆಯನ್ನಾದರೂ ನೀಡಬಹುದಲ್ಲವೇ?

ದಡದಹಳ್ಳಿ ರಮೇಶ್, ಚಂದಕವಾಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT