ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೇಲ್ | ಸ್ಪಷ್ಟ ಬಹುಮತ ಪಡೆಯಲು ಬೆಂಜಮಿನ್‌ ವಿಫಲ: ಮತ್ತೆ ರಾಜಕೀಯ ಬಿಕ್ಕಟ್ಟು

Last Updated 4 ಮಾರ್ಚ್ 2020, 19:45 IST
ಅಕ್ಷರ ಗಾತ್ರ

ಜೆರುಸಲೇಂ: ಇಸ್ರೇಲ್‌ನಲ್ಲಿ ಮತ್ತೊಮ್ಮೆ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿದೆ. ಸಂಸತ್‌ ಚುನಾವಣೆಯಲ್ಲಿ ಪ್ರಧಾನಿ ಬೆಂಜಮಿನ್‌ ನೇತನ್ಯಾಹು ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದಾರೆ.

ಶೇಕಡ 99ರಷ್ಟು ಮತಗಳ ಎಣಿಕೆ ಪೂರ್ಣಗೊಂಡಿದ್ದು, ನೇತನ್ಯಾಹು ಅವರ ಲಿಕುಡ್‌ ಪಕ್ಷ 120 ಸ್ಥಾನಗಳ ಪೈಕಿ 35ರಲ್ಲಿ ಮಾತ್ರ ಜಯಗಳಿಸಿದೆ. ಬೆನ್ನಿ ಗಾಂಟ್ಸ್‌ ನೇತೃತ್ವದ ಬ್ಲೂ ಆ್ಯಂಡ್‌ ವೈಟ್‌ ಪಕ್ಷ 32 ಸ್ಥಾನಗಳಲ್ಲಿ ಜಯಗಳಿಸಿದೆ.

ಸರ್ಕಾರ ರಚಿಸಲು 61 ಸ್ಥಾನಗಳನ್ನು ಪಡೆಯುವುದು ಅಗತ್ಯವಿದೆ. ನೇತನ್ಯಾಹು ಅವರು ಮಿತ್ರ ಪಕ್ಷಗಳನ್ನು ಸೇರಿಸಿದರೂ 58 ಸದಸ್ಯರ ಬೆಂಬಲ ಪಡೆಯಲು ಮಾತ್ರ ಸಾಧ್ಯವಾಗಿದೆ. ಬೆನ್ನಿ ಗಾಂಟ್ಸ್‌ ಅವರಿಗೂ ಸಮ್ಮಿಶ್ರ ಸರ್ಕಾರ ರಚಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ, ಮತ್ತೊಮ್ಮೆ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಹೊಸದಾಗಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಇಸ್ರೇಲ್‌ನಲ್ಲಿ ಇದುವರೆಗೆ ಒಂದೇ ವರ್ಷದಲ್ಲಿ ಮೂರು ಬಾರಿ ಚುನಾವಣೆಗಳು ನಡೆದಿವೆ. ಈಗ ನಾಲ್ಕನೇ ಬಾರಿ ಚುನಾವಣೆಗೆ ಸಿದ್ಧತೆ ಕೈಗೊಳ್ಳಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT