ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌ | ಇಟಲಿಯಲ್ಲಿ ಜೂನ್ 3ರಿಂದ ವಿದೇಶಿ ಪ್ರಯಾಣಕ್ಕೆ ಅನುಮತಿ 

Last Updated 16 ಮೇ 2020, 5:07 IST
ಅಕ್ಷರ ಗಾತ್ರ

ರೋಮ್‌: ಕೊರೊನಾ ವೈರಸ್‌ನಿಂದತತ್ತರಿಸಿರುವಇಟಲಿ ಜೂನ್‌ 3ರಿಂದ ವಿದೇಶಿ ಪ್ರಯಾಣಕ್ಕೆ ಅನುಮತಿ ನೀಡಿದೆ.

ವಿದೇಶದಿಂದ ಬರುವವರು ಮತ್ತು ವಿದೇಶಕ್ಕೆ ಪ್ರಯಾಣಿಸುವವರಿಗೆ ಅನುಮತಿ ನೀಡಿ ಸರ್ಕಾರಸುಗ್ರೀವಾಜ್ಞೆ ಹೊರಡಿಸಿದೆ.

ಕೆಲವು ಪ್ರದೇಶಗಳನ್ನು ಹೊರತುಪಡಿಸಿ ಬಹುತೇಕ ಕಡೆಗಳಲ್ಲಿ ಲಾಕ್‌ಡೌನ್‌ ನಿಯಮಗಳನ್ನು ಸಡಿಲಗೊಳಿಸುವ ಮೂಲಕ ಅದೇ ದಿನದಿಂದ ದೇಶದಾದ್ಯಂತ ಸಾರ್ವಜನಿಕರ ಒಡಾಟಕ್ಕೂಅನುಮತಿ ನೀಡಲಾಗಿದೆ.

ಇಟಲಿ ಪ್ರಧಾನಿ ಗಿಯಸೆಪ್ಪೆ ಕಾಂಟೆ ಮಾತನಾಡಿ, ‘ಎರಡನೇ ಹಂತದ ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟನಲ್ಲಿ ಸಾರ್ವಜನಿಕರು ಜಾಗೃತಿ ವಹಿಸುವುದರೊಂದಿಗೆ ಸಾಮಾನ್ಯ ಸ್ಥಿತಿಗೆ ಮರಳಬೇಕು’ ಎಂದು ಮನವಿ ಮಾಡಿದ್ದಾರೆ.

ಇಟಲಿಯಲ್ಲಿ ಇವರೆಗೆ 2,23,885 ಮಂದಿ ಕೊರೊನಾ ಸೋಂಕಿತರಿದ್ದು, 31,610 ಮಂದಿ ಮೃತಪಟ್ಟಿದ್ದಾರೆ. ಹೆಚ್ಚು ಮೃತಪಟ್ಟವರ ಪಟ್ಟಿಯಲ್ಲಿ ಮೊದಲೆರಡು ಸ್ಥಾನದಲ್ಲಿ ಅಮೆರಿಕ, ಇಂಗ್ಲೆಂಡ್‌ ಇದ್ದರೆ, ಇಟಲಿ ಮೂರನೇ ನಂತರದ ಸ್ಥಾನದಲ್ಲಿದೆ.

ಕೋವಿಡ್‌–19 ತಡೆಗಟ್ಟುವ ನಿಟ್ಟಿನಲ್ಲಿ ಮಾರ್ಚ್‌ನಲ್ಲಿ ಇಟಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಜಾರಿಗೊಳಿಸಿತು. ಸೋಂಕು ನಿಯಂತ್ರಣಕ್ಕೆ ಬಂದ ಬಳಿಕ ಮೇ 4ರಂದು ಲಾಕ್‌ಡೌನ್‌ ಸಡಿಲಿಕೆಗೆ ಸರ್ಕಾರ ಅನುಮತಿ ನೀಡಿತ್ತು.

ಮೇ 18ರಂದು ಅಂಗಡಿ, ವ್ಯಾಪಾರ ವಹಿವಾಟುಗಳು ಪ್ರಾರಂಭವಾಗಲಿದ್ದು, ಅದೇ ದಿನ ವಿದೇಶಿ ಪ್ರಯಾಣಕ್ಕೆ ಅನುಮತಿ ನೀಡಲು ಸರ್ಕಾರ ಮುಂದಾಗಿದೆ.

ಆರೋಗ್ಯ ಅಧಿಕಾರಿಗಳು ಶಿಫಾರಸು ಅನ್ವಯಅಂಗಡಿ, ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಅಂತರ ಕಾಯ್ದುಕೊಳ್ಳುವಿಕೆ ಜೊತೆಗೆ ಸ್ವಚ್ಛತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT