ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾಶ್ಮೀರದಲ್ಲಿ ಭಯೋತ್ಪಾದನೆ ಹೆಚ್ಚುವ ಭೀತಿ’

Last Updated 2 ಅಕ್ಟೋಬರ್ 2019, 19:04 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ‘ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದಾಗಿರುವ ಈ ಸಂದರ್ಭದಲ್ಲಿ, ಪಾಕಿಸ್ತಾನದ ಉಗ್ರರು ಭಯೋತ್ಪಾದಕ ದಾಳಿಗಳನ್ನು ನಡೆಸುವ ಭೀತಿ ಹೆಚ್ಚಿದೆ’ ಎಂದು ಅಮೆರಿಕ ಮಂಗಳವಾರ ಕಳವಳ ವ್ಯಕ್ತಪಡಿಸಿದೆ.

‘ಉಗ್ರರ ಗುಂಪುಗಳ ಮೇಲೆ ಪಾಕಿಸ್ತಾನ ನಿಯಂತ್ರಣ ಹೊಂದದೆ ಇದ್ದರೆ, ಕಾಶ್ಮೀರದ ಸಲುವಾಗಿ ದಾಳಿಗಳಾಗುವ ಸಂಭವ ಇದೆ. ಈ ಕುರಿತು ಹಲವು ರಾಷ್ಟ್ರಗಳು ಕಳವಳ ವ್ಯಕ್ತಪಡಿಸಿವೆ’ ಎಂದು ಇಂಡೊ ಪೆಸಿಫಿಕ್ ರಕ್ಷಣಾ ವ್ಯವಹಾರಗಳ ಸಹಾಯಕ ಕಾರ್ಯದರ್ಶಿ ರ್‍ಯಾಂಡಲ್ ಶ್ರೈವರ್ ತಿಳಿಸಿದ್ದಾರೆ.

ಕಾಶ್ಮೀರ ವಿಷಯಕ್ಕೆ ಸಂಬಂಧಿಸಿ ಪಾಕಿಸ್ತಾನಕ್ಕೆ ಚೀನಾ ಬೆಂಬಲಿಸುತ್ತಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ ರ್‍ಯಾಂಡಲ್ ಅವರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

‘ಪಾಕಿಸ್ತಾನಕ್ಕೆ ಚೀನಾ ನೀಡುತ್ತಿರುವ ಬೆಂಬಲ ಬಹುಶಃ ರಾಜತಾಂತ್ರಿಕ ಮತ್ತು ರಾಜಕೀಯವಾದದ್ದು ಇರಬಹುದು. ಪಾಕ್ ಜತೆ ಚೀನಾ ದೀರ್ಘಾವಧಿಯಿಂದ ಬಾಂಧವ್ಯ ಹೊಂದಿದೆ’ ಎಂದು ಅವರು ಹೇಳಿದರು

‘ಭಾರತಕ್ಕೆ ಈ ಎರಡೂ ರಾಷ್ಟ್ರಗಳು ಹಲವು ಕ್ಷೇತ್ರಗಳಲ್ಲಿ ಹೆಚ್ಚು ಸ್ಪರ್ಧೆಯೊಡ್ಡುತ್ತಿವೆ. ಆದರೆ ಚೀನಾ ಜತೆ ಭಾರತ ಸ್ಥಿರವಾದ ಬಾಂಧವ್ಯ ಹೊಂದಲು ಬಯಸುತ್ತದೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT