ಪ್ರವಾಹದಲ್ಲಿ ಕೊಚ್ಚಿ ಹೋದ ಮನೆಗಳು: ತತ್ತರಿಸಿದ ಜಪಾನ್

ಟೋಕಿಯೊ/ಮನಿಲಾ: ಜಪಾನ್ನಲ್ಲಿ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ 38 ಮಂದಿ ಸಾವಿಗೀಡಾಗಿದ್ದು, 47ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಪ್ರವಾಹದ ರಭಸಕ್ಕೆ ಮನೆ, ಕಚೇರಿ, ಸೇತುವೆ, ರಸ್ತೆಗಳು ಕೊಚ್ಚಿ ಹೋಗಿವೆ. ರಕ್ಷಣಾ ಕಾರ್ಯಾಚರಣೆ ಭರದಿಂದ ನಡೆಯುತ್ತಿದೆ. ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, 16 ಅಡಿಗೂ ಹೆಚ್ಚು ನೀರು ನಿಂತಿದೆ.
ಸೇನೆ, ಪೊಲೀಸ್ ಮತ್ತು ಅಗ್ನಿಶಾಮಕ ಮತ್ತು ತುರ್ತು ವ್ಯವಸ್ಥೆಯ ಸುಮಾರು 48 ಸಾವಿರ ಮಂದಿಯನ್ನು ನಿಯೋಜಿಸಲಾಗಿದೆ. ಪ್ರವಾಹಕ್ಕೆ ಸಿಲುಕಿದವರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಲಾಗುತ್ತಿದೆ. ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ 3.60ಲಕ್ಷ ಮಂದಿಗೆ ನಿರ್ದೇಶನ ನೀಡಿದೆ.
ಫಿಲಿಪ್ಪೀನ್ಸ್ನಲ್ಲೂ ಭಾರಿ ಮಳೆಯಾಗಿದ್ದು, ಮನಿಲಾ ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿರುವುದರಿಂದ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.
ಪ್ರತಿಕ್ರಿಯಿಸಿ (+)