ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಪಾನ್ | ಸೋಂಕು ನಿಯಂತ್ರಣಕ್ಕಾಗಿ ಮೇ ಅಂತ್ಯದವರೆಗೆ ತುರ್ತುಪರಿಸ್ಥಿತಿ ವಿಸ್ತರಣೆ

Last Updated 4 ಮೇ 2020, 17:31 IST
ಅಕ್ಷರ ಗಾತ್ರ

ಟೋಕಿಯೊ:ಕೊರೊನಾ ಸೋಂಕು ನಿಯಂತ್ರಿಸಲು ಜಪಾನ್‌ನಲ್ಲಿ ಹೇರಲಾಗಿರುವ ತುರ್ತು ಪರಿಸ್ಥಿತಿಯನ್ನು ಪ್ರಧಾನಿ ಶಿಂಜೊ ಅಬೆಅವರು ಈ ತಿಂಗಳ ಅಂತ್ಯದವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

ತಜ್ಞರೊಂದಿಗೆ ಚರ್ಚಿಸಿ ಕೊರೊನಾ ನಿಯಂತ್ರಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿಲ್ಲ. ಇದರಿಂದಾಗಿ ಆಸ್ಪತ್ರೆಗಳಿಗೆ ಹೊರೆ ಹೆಚ್ಚಾಗುತ್ತಿದೆ. ಹಾಗಾಗಿ ಎಲ್ಲರೂ ಸುರಕ್ಷಿತವಾಗಿ ಮನೆಯಲ್ಲೇ ಉಳಿಯಬೇಕು.

ಕೊರೊನಾ ನಿಯಂತ್ರಣಕ್ಕೆ ಬಂದಲ್ಲಿ ತುರ್ತು ಪರಿಸ್ಥಿತಿಯನ್ನು ಈ ತಿಂಗಳಾಂತ್ಯದ ಮೊದಲೇ ಅಂತ್ಯಗೊಳಿಸಲಾಗುವುದು ಎಂದು ಶಿಂಜೊ ಅಬೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT