ಭಾನುವಾರ, ಏಪ್ರಿಲ್ 18, 2021
31 °C

‘ಮಾತುಕತೆ ಮೂಲಕ ಕಾಶ್ಮೀರ ವಿವಾದ ಪರಿಹರಿಸಿ’

ಪಿಟಿಐ Updated:

ಅಕ್ಷರ ಗಾತ್ರ : | |

ಬೀಜಿಂಗ್‌: ಭಾರತ ಮತ್ತು ಪಾಕಿಸ್ತಾನ ಪರಸ್ಪರ ಮಾತುಕತೆಯ ಮೂಲಕ ಕಾಶ್ಮೀರ ಹಾಗೂ ಇತರ ವಿವಾದಗಳನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು ಎಂದು ಚೀನಾ ಶುಕ್ರವಾರ ಹೇಳಿದೆ.

ಉಭಯ ದೇಶಗಳ ನಡುವಿನ ಸಂಬಂಧ ಸುಧಾರಣೆಗೆ ಅಮೆರಿಕ ಸೇರಿದಂತೆ ಅಂತರರಾಷ್ಟ್ರೀಯ ಸಮುದಾಯಗಳು ರಚನಾತ್ಮಕ ಪಾತ್ರ ವಹಿಸುತ್ತಿವೆ. ಇವುಗಳಿಗೆ ನಮ್ಮ ಬೆಂಬಲವಿದೆ ಎಂದಿದೆ.

ಕಾಶ್ಮೀರ ವಿವಾದ ಪರಿಹಾರಕ್ಕೆ ಮಧ್ಯವರ್ತಿಯಾಗಿ ಕಾರ್ಯ ನಿರ್ವಹಿಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಜೊತೆ ಶ್ವೇತಭವನದಲ್ಲಿ ನಡೆದ ಮಾತುಕತೆಯ ವೇಳೆ ಹೇಳಿದ್ದರು. ಅನಂತರ ಚೀನಾ ಈ ಪ್ರತಿಕ್ರಿಯೆ ನೀಡಿದೆ.

’ಉಭಯ ದೇಶಗಳು ಪರಸ್ಪರ ಸಾಮರಸ್ಯ ಕಾಪಾಡಿಕೊಳ್ಳುವ ಭರವಸೆ ಇದೆ’ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನ್ಯಿಂಗ್‌ ಹೇಳಿದ್ದಾರೆ.

ಜಪಾನ್‌ನ ಒಸಾಕದಲ್ಲಿ ನಡೆದ ಜಿ–20 ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ನನ್ನಲ್ಲಿ ಕೋರಿದ್ದರು ಎಂದು ಟ್ರಂಪ್‌ ಈಚೆಗೆ ಹೇಳಿದ್ದರು. ಈ ಹೇಳಿಕೆಯನ್ನು ಭಾರತವು ಅಲ್ಲಗಳೆದಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು